ದಾವಣಗೆರೆ: ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕೇರಳ ಮತ್ತು ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಮೂಡಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಕಾಂಗ್ರೆಸ್ ಮೈತ್ರಿ ಅಧಿಕಾರ ಹಿಡಿಯಲಿದೆ ಎಂದು ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್ ತಿಳಿಸಿದರು.

‘ಪಂಚರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಹೊರತುಪಡಿಸಿ ಉಳಿಧೆಡೆ ಕಾಂಗ್ರೆಸ್ಗೆ ಅತ್ಯುತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಶಕ್ತಿ ಕಳೆದ ಬಾರಿಗಿಂತ ಹೆಚ್ಚಲಿದೆ. ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಗೆಲುವು ಸಾಧಿಸಲಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

‘2019–20ರಿಂದ 2025–26ರವರೆಗೆ ಕರ್ನಾಟಕದಿಂದ ₹ 23,000 ಕೋಟಿ ರಾಷ್ಟ್ರೀಯ ಹೆದ್ದಾರಿ ಶುಲ್ಕವನ್ನು ಕೇಂದ್ರ ಸರ್ಕಾರ ವಸೂಲಿ ಮಾಡಿದೆ. ಏ.1ರಿಂದ ಈ ಶುಲ್ಕವನ್ನು ಮತ್ತೆ ಶೇ 5ರಷ್ಟು ಹೆಚ್ಚಿಸಲಾಗಿದೆ. ಮಧುಮೇಹ, ರಕ್ತದೊತ್ತಡ ಸೇರಿ ಹಲವು ಕಾಯಿಲೆಗಳಿಗೆ ರೋಗಿಗಳು ಬಳಸುವ 900 ಔಷಧಗಳ ಬೆಲೆ ಏರಿಕೆಯಾಗಿದೆ’ ಎಂದು ಆರೋಪಿಸಿದರು.

‘ದೇಶದ ಶೇ 90ರಷ್ಟು ಇಂಧನವು ಮಧ್ಯ, ಪಶ್ಚಿಮ ಏಷ್ಯಾದಿಂದ ಪೂರೈಕೆ ಆಗುತ್ತದೆ. ಯುದ್ಧ ಭೀತಿ ಗ್ರಹಿಸಿದ ಇತರ ರಾಷ್ಟ್ರಗಳು ಇಂಧನಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದವು. ಭಾರತ ಇದರಲ್ಲಿ ವಿಫಲವಾಗಿದೆ. ಈ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವಕಾಶ ನೀಡಲಿಲ್ಲ’ ಎಂದು ದೂರಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಿಧಾನಪರಿಷತ್ ಸದಸ್ಯರಾದ ಬಲ್ಕಿಸ್ ಬಾನು, ರಮೇಶ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜು ಹಾಜರಿದ್ದರು.

ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಕಾಣಿಸಿಕೊಂಡಿದ್ದು, ಮುಸ್ಲಿಂ ಮತಗಳು ಇಬ್ಬಾಗ ಆಗುವುದಿಲ್ಲ
ಸಲೀಂ ಅಹಮ್ಮದ್, ಮುಖ್ಯ ಸಚೇತಕ, ವಿಧಾನಪರಿಷತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.