ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಬಿರುಸಿನ ಪ್ರಚಾರ

Last Updated 6 ಡಿಸೆಂಬರ್ 2021, 4:42 IST
ಅಕ್ಷರ ಗಾತ್ರ

ಚನ್ನಗಿರಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ಸರ್ಕಾರಗಳಾಗಿವೆ. ಈ ಸರ್ಕಾರಗಳ ದುರಾಡಳಿತವನ್ನು ರಾಜ್ಯದ ಜನರು ನೋಡಿ ಬೇಸತ್ತಿದ್ದಾರೆ. ಹೀಗಾಗಿ ವಿಧಾನಪರಿಷತ್‌ ಚುನಾವಣೆಯಲ್ಲಿ ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸುವ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗುವುದು ಖಚಿತ ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ದಾವಣಗೆರೆ–ಶಿವಮೊಗ್ಗ ವಿಧಾನಪರಿಷತ್‌ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

‘ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದ ಕೇಂದ್ರ ಸರ್ಕಾರ ರೈತರ ನಿರಂತರ ಹೋರಾಟಕ್ಕೆ ಮಣಿದು ಕಾಯ್ದೆಗಳನ್ನು ಚರ್ಚೆ ನಡೆಸದೇ ವಾಪಸ್ ಪಡೆದುಕೊಂಡಿದೆ. ಡಿಸೇಲ್, ಪೆಟ್ರೋಲ್ ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜನ ಸಾಮಾನ್ಯರು ಬದುಕು ಸಾಗಿಸುವುದು ದುಸ್ತರವಾಗಿದೆ. ಬಿಜೆಪಿ ಸರ್ಕಾರ ಶ್ರೀಮಂತರ ಪರ ಇರುವ ಸರ್ಕಾರ. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರ. ಜನರು ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸನ್ನಕುಮಾರ್ ಅವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ಮಾತನಾಡಿ, ‘ಕಳೆದ ಬಾರಿಯ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಗೆದ್ದಿದ್ದು, ಪಕ್ಷ ನನ್ನ ಸೇವೆಯನ್ನು ಗುರುತಿಸಿ ಮತ್ತೆ ನನ್ನನ್ನು ಈ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಿದೆ. ಬಿಜೆಪಿ ಸರ್ಕಾರದ ಜನ ವಿರೋಧಿ ಆಡಳಿತವನ್ನು ಕಂಡು ಜನರು ಬದಲಾವಣೆಯನ್ನು ಬಯಸಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಆಯ್ಕೆ ಮಾಡುವ ಮೂಲಕ ಸೇವೆಯನ್ನು ಮಾಡಲು ಮತದಾರರು ಅವಕಾಶ ಮಾಡಿಕೊಡಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ತಾಲ್ಲೂಕು ಸಮಿತಿ ಅಧ್ಯಕ್ಷ ಸಿ.ಎಚ್.ಶ‍್ರೀನಿವಾಸ್, ಮುಖಂಡರಾದ ಸಿ. ನಾಗರಾಜ್, ಪುರಸಭೆ ಸದಸ್ಯರಾದ ಬಿ.ಆರ್.ಹಾಲೇಶ್, ಜಿ. ನಿಂಗಪ್ಪ, ಸೈಯದ್ ಗೌಸ್ ಪೀರ್, ಜಬೀವುಲ್ಲಾ, ಅಶೋಕ್, ವಡ್ನಾಳ್ ಜಗದೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT