ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವಜನಾಂಗದ ಶಾಂತಿಯ ತೋಟವಾಗಬೇಕಾದರೆ ಕಾಂಗ್ರೆಸ್ ಗೆಲ್ಲಿಸಿ: ಶಾಮನೂರು

Published 3 ಮೇ 2024, 5:19 IST
Last Updated 3 ಮೇ 2024, 5:19 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18,7,8 ಮತ್ತು 10ನೇ ವಾರ್ಡ್‍ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭರ್ಜರಿ ರೋಡ್ ಶೋ ನಡೆಸಿದರು.

‘ಭಾರತ ಸರ್ವಜನಾಂಗದ ಶಾಂತಿಯ ತೋಟ. ಇಂತಹ ತೋಟವನ್ನು ಹಾಳು ಮಾಡುವ ಜನರನ್ನು ದೂರವಿಡಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಿದೆ’ ಎಂದು ತಿಳಿಸಿದರು.

‘ದಾವಣಗೆರೆ ದಕ್ಷಿಣ ಕ್ಷೇತ್ರವೂ ಇದ್ದಂತೆ. ಇಲ್ಲಿ ಎಲ್ಲಾ ಜಾತಿ ಧರ್ಮದವರು ಇದ್ದಾರೆ. ಈ ಭಾಗದಲ್ಲಿ ನಮಗೆ ಯಾವ ರೀತಿ ಸದಾ ಬೆಂಬಲ ನೀಡುತ್ತಾ ಉತ್ತಮ ವಾತಾವರಣಕ್ಕೆ ಸಹಕಾರಿಯಾಗಿದ್ದಿರಿ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

‘ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ತರುವ ಭರವಸೆ ನೀಡಿತ್ತು. ಅದರಂತೆ ಸರ್ಕಾರ ಬಂದ ತಕ್ಷಣ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವೊಂದಕ್ಕೆ ಮಾರ್ಚ್ ಅಂತ್ಯಕ್ಕೆ ಸುಮಾರು ₹122 ಕೋಟಿಯಷ್ಟು ಹಣವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ’ ಎಂದರು.

ಮೇಯರ್ ವಿನಾಯಕ ಪೈಲ್ವಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ನಾಯಕ ಸಮಾಜದ ಅಧ್ಯಕ್ಷ ಬಿ.ವೀರಣ್ಣ, ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಮಾಜಿ ಸದಸ್ಯ ಪಿ.ಎನ್. ಚಂದ್ರಶೇಖರ್, ಮಾಜಿ ಮೇಯರ್ ಅನಿತಾಬಾಯಿ, ಮಾಜಿ ಸದಸ್ಯ ಪಿ.ಎನ್. ಚಂದ್ರಶೇಖರ್, ಧೂಡಾ ಮಾಜಿ ಅಧ್ಯಕ್ಷ ಮಾಲತೇಶ್ ರಾವ್, ಮಾಜಿ ಸಂಸದ ಕೆ.ಸಿ.ಕೊಂಡಯ್ಯ, ಉದ್ಯಮಿಗಳಾದ ಅಥಣಿ ವೀರಣ್ಣ, ಎಸ್.ಕೆ.ವೀರಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮುಖಂಡರಾದ ಎಸ್.ಎನ್.ಚಂದ್ರಪ್ಪ, ಮಾಜಿ ಸದಸ್ಯ ಬಾಬುರಾವ್ ಸಾಳಂಕಿ, ಪರಮೇಶ್, ಶಂಭು, ವಿಶ್ವನಾಥ, ಡಿಶ್ ಮಂಜುನಾಥ್, ಸತೀಶ್, ಕ್ಯಾಪ್ಟನ್ ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT