ಬುಧವಾರ, ಆಗಸ್ಟ್ 4, 2021
28 °C
ಶಾಸಕ ಶಾಮನೂರು ಶಿವಶಂಕರಪ್ಪ ಸಲಹೆ

ಕಾಂಗ್ರೆಸ್ ಕಾರ್ಯಕರ್ತರು ಜನರ ಕಷ್ಟಕ್ಕೆ ಸ್ಪಂದಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಮ್ಮಿಕೊಂಡಿರುವ ಉಚಿತ ಕೋವಿಡ್‌ ಲಸಿಕಾ ಶಿಬಿರ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು.

ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಪಡೆದ ಕಾಂಗ್ರೆಸ್ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಶಾಮನೂರು ಶಿವಶಂಕರಪ್ಪ, ‘ಪ್ರತಿಯೊಬ್ಬ ಕಾರ್ಯಕರ್ತರೂ ಜನರ ಬಳಿ ಹೋಗಿ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಬೇಕು’ ಎಂದು ಸೂಚಿಸಿದರು.

ಕಾಂಗ್ರೆಸ್ ಮಹಿಳಾ ಘಟಕ, ಸೇವಾದಳ, ಕಿಸಾನ್ ಕಾಂಗ್ರೆಸ್, ಯವ ಕಾಂಗ್ರೆಸ್, ಎನ್ಎಸ್ಯುಐ, ಇಂಟೆಕ್ ಮತ್ತು ಸಾಮಾಜಿಕ ಜಾಲತಾಣ ಹಾಗೂ ದಾವಣಗೆರೆ ಜಿಲ್ಲಾ ಬ್ಯೂಟಿಪಾರ್ಲರ್ ಅಸೋಸಿಯೇಷನ್ ಪದಾಧಿಕಾರಿಗಳಿಗೆ ಲಸಿಕೆ ನೀಡಲಾಯಿತು.

ತಮ್ಮ ಸ್ವಂತ ಹಣದಲ್ಲಿ ಉಚಿತವಾಗಿ ಲಸಿಕೆ ನೀಡಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಡೋಲಿ ಚಂದ್ರು, ಸುರೇಶ್ ಜಾಧವ್, ಹರೀಶ್, ಮಹ್ಮದ್ ಬಾಷಾ, ಲಿಯಾಕತ್ ಅಲಿ, ಮೈನುದ್ದಿನ್, ಸದ್ದಾಂ, ಸತೀಶ್ ಶೆಟ್ಟಿ, ಶ್ರೀಮತಿ ಕವಿತಾ ಚಂದ್ರಶೇಖರ್ ಕೃತಜ್ಞತೆ ಸಲ್ಲಿಸಿದರು.

 ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ವಿರೋಧಪಕ್ಷದ ನಾಯಕ ಎ. ನಾಗರಾಜ್, ಮಹಿಳಾ ಕಾಂಗ್ರೆಸ್‍ನ ದಾಕ್ಷಾಯಣಮ್ಮ, ರುದ್ರಮ್ಮ, ಶುಭಮಂಗಳ, ರಾಜೇಶ್ವರಿ, ಆಶಾ ಮುರುಳಿ, ಉಮಾ ಕುಮಾರ್, ಗೀತಾ ಚಂದ್ರಶೇಖರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.