ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಕ್ರಮ ಬದಲಿಸಲು ಚಿಂತನೆ

ವಿಟಿಯು ಕುಲಪತಿ ಡಾ. ವಿದ್ಯಾಶಂಕರ್‌
Last Updated 2 ಡಿಸೆಂಬರ್ 2022, 5:09 IST
ಅಕ್ಷರ ಗಾತ್ರ

ದಾವಣಗೆರೆ: ‘ಉದ್ಯಮಗಳಿಗೆ ಯಾವ ರೀತಿಯ ಉದ್ಯೋಗಿಗಳು ಬೇಕು ಎಂಬುದು ಮುಖ್ಯ. ಅಂತಹ ಉದ್ಯೋಗಿಗಳನ್ನು ಸೃಷ್ಟಿಸಲು ಅಗತ್ಯವಾದ ಪಠ್ಯಕ್ರಮಗಳನ್ನು ಬದಲಿಸುವ ಚಿಂತನೆ ಇದೆ’ ಎಂದುಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕುಲಪತಿ ಡಾ. ವಿದ್ಯಾಶಂಕರ್‌ ಹೇಳಿದರು.

ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ಎಂಜಿನಿಯರಿಂಗ್‌ನಲ್ಲಿ ಗ್ರಾಜುಯೇಟ್ ಆಪ್ಟಿಟ್ಯೂಡ್ (GATE ) ಪರೀಕ್ಷೆ ಕಡ್ಡಾಯವಾಗಲಿದೆ. ಆರಂಭಿಕ ಹಂತದಲ್ಲಿಯೇ ಕಠಿಣ ಶ್ರಮದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ. ಗುಣಮಟ್ಟದ ಶಿಕ್ಷಣ ಪಡೆದಾಗ ಮಾತ್ರ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ಸಾಧ್ಯವಿದೆ ಎಂದು ಸಲಹೆ ನೀಡಿದರು.

ಯುಬಿಡಿಟಿ ಕಾಲೇಜಿನಲ್ಲಿ ಕಡಿಮೆ ದರದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.ಇಲ್ಲಿ ನುರಿತ ಉಪನ್ಯಾಸಕರು, ಸುಸಜ್ಜಿತ ಪ್ರಯೋಗಾಲ ಯಗಳಿವೆ. ಅವುಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

440 ಸ್ನಾತಕ ಹಾಗೂ 451 ಸ್ನಾತಕೋತ್ತರ ಸೀಟುಗಳು ಲಭ್ಯವಿವೆ. ಸಂಶೋಧನೆಯಲ್ಲಿ ಕಾಲೇಜು ಮುಂಚೂಣಿಯಲ್ಲಿದೆ. ಕಾಲೇಜಿನ 75 ವಿದ್ಯಾರ್ಥಿಗಳು ಇಲ್ಲಿಯವರೆಗೆ ಪಿಎಚ್‌ಡಿ ಪಡೆದಿದ್ದು, ಇನ್ನೂ 145 ವಿದ್ಯಾರ್ಥಿಗಳು ಪಿಎಚ್‌ಡಿ ಮಾಡುತ್ತಿದ್ದಾರೆ ಎಂದುಕಾಲೇಜಿನ ಪ್ರಾಂಶುಪಾಲ ಡಾ. ಶಿವಪ್ರಸಾದ್ ಬಿ. ದಂಡಗಿ ಹೇಳಿದರು.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ, ಜವಳಿ ಉದ್ಯಮಿ ಬಿ.ಸಿ. ಶಿವಕುಮಾರ್, ಪ್ರಭಾಕರ್, ಡಾ.ಮಲ್ಲಿಕಾರ್ಜುನ ಎಸ್. ಹೊಳಿ, ಡಾ.ಎನ್. ನಾಗೇಶ್, ಡಾ.ಎಚ್. ಈರಮ್ಮ,ಡಾ.ಕೆ.ಪ್ರಭಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT