ಸೋಮವಾರ, ಏಪ್ರಿಲ್ 19, 2021
32 °C

ಸಿದ್ದವೀರಪ್ಪ ಬಡಾವಣೆಯಲ್ಲಿ ಮತಾಂತರದ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ಸಿದ್ದವೀರಪ್ಪ ಬಡಾವಣೆಯ ಪ್ರಾರ್ಥನಾ ಮಂದಿರದಲ್ಲಿ ಮತಾಂತರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರಾರ್ಥನಾ ಮಂದಿರದಲ್ಲಿ 40ರಿಂದ 50 ಮಂದಿ ಇದ್ದು, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಅಲ್ಲಿಗೆ ಭೇಟಿ ನೀಡಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಎರಡೂ ಧರ್ಮದವರ ನಡುವೆ ವಾಗ್ವಾದ ನಡೆದಿದ್ದು, ಈ ಕುರಿತ ವಿಡಿಯೊ
ಹರಿದಾಡಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದರು. ‘ಕೋವಿಡ್ ಸಂದರ್ಭವಾಗಿರುವುದರಿಂದ ಇಷ್ಟು ಜನರು ಸೇರುವ ಹಾಗಿಲ್ಲ. ಪರವಾನಗಿ ಇದೆಯಾ’ ಎಂದು ಪ್ರಶ್ನಿಸಿದರು.

ಅಲ್ಲಿದ್ದವರು ಸೋಮವಾರ ಪೊಲೀಸ್ ಠಾಣೆಗೆ ಬಂದು ದಾಖಲೆಗಳನ್ನು ನೀಡುವುದಾಗಿ ತಿಳಿಸಿದರು. ಯಾವುದೇ ಪ್ರಕರಣ ದಾಖಲಾಗಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.