ದಾವಣಗೆರೆ: ಸಹಕಾರ ವಲಯದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ, ಬ್ಯಾಂಕ್ ಅಭಿವೃದ್ಧಿಯ ದೃಷ್ಟಿಯಿಂದ ವಿಶೇಷ ಕಾರ್ಯದಕ್ಷತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ವಿಭಾಗದ ಉಪನಿರ್ದೇಶಕ ಕೆ. ಮಹೇಶ್ವರಪ್ಪ ಅಭಿಪ್ರಾಯಪಟ್ಟರು.

ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ಸಹಕಾರ ಇಲಾಖೆಯ ಆಶ್ರಯದಲ್ಲಿ ನಗರದ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ಸಹಕಾರ ಬ್ಯಾಂಕ್ ಸಿಬ್ಬಂದಿಗೆ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಭಾರತೀಯ ರಿಸರ್ವ್ ಬ್ಯಾಂಕ್, ನಬಾರ್ಡ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸುವ ಸುತ್ತೋಲೆಗಳ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸಿದರೆ ಯಶಸ್ವಿ ಬ್ಯಾಂಕರ್ ಆಗಬಹುದು. ಜಿಲ್ಲಾ ಸಹಕಾರ ಒಕ್ಕೂಟವು ನಿರಂತರವಾಗಿ ತರಬೇತಿ ನೀಡಲಿದೆ ಎಂದು ಹೇಳಿದರು.

‘ಬ್ಯಾಂಕ್ಗಳು ಆಂತರಿಕ ಲೆಕ್ಕಪರಿಶೋಧನೆಯನ್ನು ನಿಯಮಿತವಾಗಿ ಮಾಡಿದರೆ, ಮುಂದೆ ಎದುರಾಗಬಹುದಾದ ಅಪಾಯಗಳನ್ನು ತಡೆಯಲು ಸಾಧ್ಯವಿದೆ. ಈ ವಿಚಾರದಲ್ಲಿ ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೇ. ಬ್ಯಾಂಕ್ಗಳು ದಿವಾಳಿಯಾಗುತ್ತಿರುವ ಪ್ರಕರಣಗಳು ಎಲ್ಲರಿಗೂ ಪಾಠವಾಗಬೇಕು. ದಕ್ಷತೆ, ಪ್ರಾಮಾಣಿಕತೆ, ಧೈರ್ಯ ಹಾಗೂ ವೃತ್ತಿ ಜ್ಞಾನ ಇದ್ದಲ್ಲಿ ನಾಯಕತ್ವ ಗುಣ ವೃದ್ಧಿಸುತ್ತದೆ. ಬ್ಯಾಂಕ್ ಸಿಬ್ಬಂದಿ ಈ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

‘ಸಾಲ ನೀಡುವುದಷ್ಟೇ ಮುಖ್ಯವಲ್ಲ, ಸಾಲ ವಸೂಲಾತಿ ಮಾಡುವುದೂ ಅಷ್ಟೇ ಪ್ರಮುಖವಾದುದು’ ಎಂದು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಆರ್. ರಾಮರೆಡ್ಡಿ ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರ ಜತೆ ಸೌಹಾರ್ದಯುತವಾಗಿ ನಡೆದುಕೊಂಡಲ್ಲಿ ಅದು ಬ್ಯಾಂಕ್ ಬೆಳವಣಿಗೆಗೆ ಪೂರಕವಾಗುತ್ತದೆ ಎಂದರು.

ನಿಯಮಿತವಾಗಿ ಬದಲಾಗುವ ರಿಸರ್ವ್ ಬ್ಯಾಂಕ್ ನಿಯಮಗಳನ್ನು ತಿಳಿದುಕೊಳ್ಳಬೇಕು. ಏನೇ ಕಾರ್ಯಕ್ರಮಗಳಿದ್ದರೂ ಅದಕ್ಕೆ ಸಹಕಾರ ನೀಡುವುದಾಗಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿರಿಗೆರೆ ರಾಜಣ್ಣ ತಿಳಿಸಿದರು.

ತರಬೇತುದಾರರಾದ ಪ್ರೊ. ನಂದೀಶ್ ಹಿರೇಮಠ್ ಹಾಗೂ ಆರ್ಬಿಐ ನಿವೃತ್ತ ವ್ಯವಸ್ಥಾಪಕ ಕೆ.ಎಸ್. ಜೀವನ್ ಕುಮಾರ್ ಅವರು ಬ್ಯಾಂಕಿಂಗ್ ನಿಯಮಗಳು ಹಾಗೂ ವೃತ್ತಿ ಕೌಶಲಗಳ ಬಗ್ಗೆ ಉಪನ್ಯಾಸ ನೀಡಿದರು.

ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ನವೀನ್, ಜಿಲ್ಲಾ ಸಹಕಾರ ಸಂಘಗಳ ಸಹಾಯಕ ನಿರ್ಬಂಧಕ ಸಿ. ಗೋಪಾಲ್, ಜಿಲ್ಲಾ ಸಹಕಾರ ಒಕ್ಕೂಟದ ಪದಾಧಿಕಾರಿಗಳಾದ ಎಚ್.ಜಿ. ಮಂಜುಳಾ ಗಣೇಶಪ್ಪ, ಸಿದ್ದೇಶ್ ಎಚ್.ಆರ್., ಎಸ್. ದೀಪಕ್ ಪಟೇಲ್, ಎನ್.ಎಸ್. ನಿರ್ಮಲಾ ಸುಭಾಷ್, ಶ್ರೀನಿವಾಸ್ ಆರ್., ಟಿ.ಎಂ. ಫಾಲಾಕ್ಷ ಹಾಗೂ ವಿವಿಧ ಸಹಕಾರ ಬ್ಯಾಂಕ್ಗಳ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.