ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ನಿಯಂತ್ರಣ ಕ್ರಮ: ಸೊಕ್ಕೆ ಗ್ರಾ. ಪಂ.ಗೆ ಮುಖ್ಯಮಂತ್ರಿ ಮೆಚ್ಚುಗೆ

Last Updated 24 ಜೂನ್ 2021, 3:09 IST
ಅಕ್ಷರ ಗಾತ್ರ

ಜಗಳೂರು: ಕೋವಿಡ್ ಎರಡನೇ ಅಲೆಯಲ್ಲಿ ಸೋಂಕು ನಿಯಂತ್ರಣ ಕಾರ್ಯದಲ್ಲಿ ತಾಲ್ಲೂಕಿನ ಸೊಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ, ಗ್ರಾಮಗಳಲ್ಲಿ ಲಸಿಕೆ ಬಳಕೆಯ ಬಗ್ಗೆ ಅರಿವು ಮೂಡಿಸುವುದು ಹಾಗೂ ಅಂತರ ಕಾಪಾಡುವುದು, ಮಾಸ್ಕ್ ಬಳಕೆಯ ಬಗ್ಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ಮೂಲಕ ಕೊರೊನಾ ಸೋಂಕು ಹತೋಟಿಗೆ ಪಂಚಾಯಿತಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ಸೇವಾಪರತೆ ಇತರೆ ಪಂಚಾಯಿತಿಗಳಿಗೂ ಮಾದರಿಯಾಗಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಲಸಿಕೆಪೂರೈಕೆ, ಬಡ ಕುಟುಂಬಗಳಿಗೆ ಆಹಾರ ಮತ್ತು ಮೆಡಿಕಲ್ ಕಿಟ್‌ ವಿತರಣೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸುರಕ್ಷಾ ಕಿಟ್ ವಿತರಿಸುವ ಮೂಲಕ ಪಂಚಾಯಿತಿ ಅಧ್ಯಕ್ಷರು ಹಾಗೂ ತಂಡ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದೆ. ಸೋಂಕು ತಡೆಗೆ ಅಧ್ಯಕ್ಷರ ಕಾರ್ಯವೈಖರಿ ಮಾದರಿಯಾಗಿದೆ’ ಶ್ಲಾಘಿಸಿದ್ದಾರೆ.

‘ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ 2ನೇ ಅಲೆಯ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಹೊರಗಿನಿಂದ ಬಂದ ವ್ಯಕ್ತಿಗಳಿಗೆ ಹಾಗೂ ಸೋಂಕು ಲಕ್ಷಣ ಹೊಂದಿರುವವರಿಗೆ ಕೂಡಲೇ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಕೈಗೊಳ್ಳುವುದು, ಸೋಂಕು ದೃಢಪಟ್ಟವರಿಗೆ ಚಿಕಿತ್ಸೆ ಮತ್ತು ಸೋಂಕಿತರ ಪ್ರದೇಶದಲ್ಲಿ ಸ್ಯಾನಿಟೈಸ್ ಮಾಡುವುದು ಹಾಗೂ ಮನೆಮನೆಗಳಿಗೆ ತೆರಳಿ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಇದರಿಂದಾಗಿ ಇಡೀ ತಾಲ್ಲೂಕಿನಲ್ಲಿ ಸೊಕ್ಕೆ ಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯಂತ ಕಡಿಮೆ ಸೋಂಕು ಪ್ರಕರಣಗಳು ಕಂಡುಬಂದಿವೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮುಖ್ಯಮಂತ್ರಿ ಯಡಿಯೂರಪ್ಪ ಅವರುನಮ್ಮ ಕಾರ್ಯವೈಖರಿಯನ್ನು ಮೆಚ್ಚಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರಿಂದ ನಮ್ಮ ಜವಾಬ್ದಾರಿ ಹೆಚ್ಚಿದೆ. ಮತ್ತಷ್ಟು ಬದ್ಧತೆಯಿಂದ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT