ಶನಿವಾರ, ಜುಲೈ 24, 2021
27 °C

ಮೂರು ಮಂದಿಗೆ ಕೊರೊನಾ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸಹಿತ ಮೂವರಿಗೆ ಸೋಂಕು ಇರುವುದು ಗುರುವಾರ ದೃಢಪಟ್ಟಿದೆ. ಗ್ರಾಮಾಂತರ ಪ್ರದೇಶಗಳಲ್ಲಿಯೂ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ರಾಜಸ್ಥಾನದಿಂದ ಹಿಂತಿರುಗಿರುವ ಆಂಜನೇಯ ಬಡಾವಣೆಯ 25 ವರ್ಷದ ಮಹಿಳೆಯಲ್ಲಿ (ಪಿ.7803) ಸೋಂಕು ಇರುವುದು ಪತ್ತೆಯಾಗಿದೆ.

ದಾವಣಗೆರೆ ತಾಲ್ಲೂಕು ಶ್ಯಾಗಲೆ ಗ್ರಾಮದ 30 ವರ್ಷದ ಯುವಕನಿಗೆ (ಪಿ.7804) ಸೋಂಕು ಇರುವುದು ಖಚಿತವಾಗಿದೆ. ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯ 32 ವರ್ಷದ ಮಹಿಳೆಯಲ್ಲೂ (ಪಿ.7805) ಸೋಂಕು ಕಾಣಿಸಿಕೊಂಡಿದೆ. ಈ ಎರಡೂ ಪ್ರಕರಣಗಳನ್ನು ಶೀತಜ್ವರ (ಐಎಲ್‌ಐ) ಎಂದು ಗುರುತಿಸಲಾಗಿದೆ. ಯಾರ ಸಂಪರ್ಕದಿಂದ ಕೊರೊನಾ ಬಂದಿದೆ ಎಂಬುದು ಪತ್ತೆಯಾಗಿಲ್ಲ.

ಹೊನ್ನಾಳಿ ತಾಲ್ಲೂಕಿನ ಮಾದೇನಹಳ್ಳಿ, ಚನ್ನಗಿರಿ ತಾಲ್ಲೂಕಿನ ಕೆರೆಬೆಳಚಿ, ಬಸವಾಪಟ್ಟಣ ಹೀಗೆ ಹಿಂದೆಯೂ ಗ್ರಾಮಾಂತರ ಪ್ರದೇಶದ ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತಾದರೂ ಅವರೆಲ್ಲರೂ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದರು, ಕ್ವಾರಂಟೈನ್‌ನಲ್ಲಿ ಇದ್ದವರು ಆಗಿದ್ದರು. ಆದರೆ ಈ ಬಾರಿ ಶ್ಯಾಗಲೆ ಮತ್ತು ಬಸವನಹಳ್ಳಿಯಲ್ಲಿ ಊರಲ್ಲೇ ಇದ್ದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದುವೇ ಆತಂಕಕ್ಕೆ ಕಾರಣವಾಗಿದೆ.

ಗುರುವಾರ 8 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 233 ಸೋಂಕಿತ ಪ್ರಕರಣಗಳು ದಾಖಲಾಗಿದೆ. ಅದರಲ್ಲಿ 215 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ 12 ಪ್ರಕರಣಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು