ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಕೆಲ ಸೇವೆ ತಾತ್ಕಾಲಿಕ ಸ್ಥಗಿತ

Last Updated 27 ಮಾರ್ಚ್ 2020, 16:43 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಹೆಚ್ಚಿನ ಮುಂಜಾಗ್ರತಾ ಕ್ರಮದ ಅಂಗವಾಗಿ ಕೆಲ ಸೇವೆಗಳನ್ನು ಮಾರ್ಚ್‌ 31ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಾರ್ವಜನಿಕರು ಸರ್ಕಾರದ ವಿವಿಧ ಸೇವೆಗಳನ್ನು ಪಡೆಯುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಜಿಲ್ಲಾ,ತಾಲ್ಲೂಕು, ಹೋಬಳಿ ಮಟ್ಟದ ಕಚೇರಿಗಳಿಗೆ ಭೇಟಿ ನೀಡುವುದು, ಏಕ ಕಾಲದಲ್ಲಿ ಒಟ್ಟಿಗೆ ಸೇರುತ್ತಿದ್ದಾರೆ. ಇದರಿಂದ ವೈರಾಣು ಹರಡಲು ಅನುಕೂಲ ವಾತಾವರಣ ಮಾಡಿಕೊಟ್ಟಂತಾಗುತ್ತದೆ. ಇದನ್ನು ತಪ್ಪಿಸಲು ಕೆಳಕಂಡ ಸೇವೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

*ಅಟಲ್ ಜೀ ಜನ ಸ್ನೇಹಿ ಕೇಂದ್ರ, ಸ್ಪಂದನ ಕೇಂದ್ರ ಮತ್ತು ಆಧಾರ ಕೇಂದ್ರಗಳಲ್ಲಿ ನೀಡಲಾಗುತ್ತಿರುವ ಸೇವೆಗಳು.
*ಪ್ರಾದೇಶಿಕ ಸಾರಿಗೆ ಇಲಾಖೆಯ ಹೊಸ ವಾಹನ ಚಾಲನಾ ರಹದಾರಿ, ಕಲಿಯುವವರ ಪರವಾನಗಿ ನೋಂದಣಿ (ವಾಹನ ಚಾಲನಾ ಪರವಾನಗಿ ನವೀಕರಣಕ್ಕೆ ನಿರ್ಬಂಧ ಇಲ್ಲ).

* ಉಪ ನೋಂದಾಣಾಧಿಕಾರಿ ಕಚೇರಿಯ ಸ್ಥಿರಾಸ್ಥಿ ನೋಂದಣಿ ಸೇವೆ.

* ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಸೇವೆಗಳು.
* ಸಹಕಾರಿ ಸಂಘಗಳ ಉಪ ನಿಬಂಧಕರು ಹಾಗೂ ಸಹಕಾರಿ ಸಂಘಗಳ ಸಹಾಯಕ ಉಪ ನಿಬಂಧಕರು ಸಹಕಾರ ಇಲಾಖೆಗೆ ಸಂಬಂಧಿಸಿದ ಸೇವೆಗಳು (ಬ್ಯಾಂಕಿಂಗ್ ಹೊರತುಪಡಿಸಿ).

*ಕೃಷಿ ತೋಟಗಾರಿಕೆ, ಮೀನುಗಾರಿಕೆ ಇಲಾಖೆಯಲ್ಲಿನ ವಿವಿಧ ಸೇವೆಗಳು (ರೈತ ಆತ್ಮಹತ್ಯೆ, ರೈತರ ಆಕಸ್ಮಿಕ ಸಾವು ಹಾಗೂ ಇತರ ತುರ್ತು ವಿಷಯ ಹೊರತುಪಡಿಸಿ)

* ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಅಧೀನದಲ್ಲಿ ಬರುವ ನಿಗಮ ಮಂಡಳಿಗಳ ಸೇವೆಗಳು.
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸೇವೆಗಳು.
*ಎಲ್ಲಾ ರೀತಿಯ ಬಟ್ಟೆ ಅಂಗಡಿಗಳು.

ಮೇಲ್ಕಂಡ ಸೇವೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದರೂ ಈ ಕಚೇರಿಗಳಿಗೆ ರಜೆ ಇಲ್ಲ. ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ಎಂದಿನಂತೆ ಕಚೇರಿಯಲ್ಲಿ ಲಭ್ಯವಿದ್ದು, ಕರ್ತವ್ಯ ನಿರ್ವಹಿಸಬೇಕುಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT