ಮಂಗಳವಾರ, ಆಗಸ್ಟ್ 3, 2021
25 °C

ದಾವಣಗೆರೆ: ಪತ್ರಿಕಾ ವಿತರಕರಿಗೆ, ಏಜೆಂಟ್‌ಗಳಿಗೆ ಕೊರೊನಾ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಎಲ್ಲ ಪತ್ರಿಕೆಗಳ ಪತ್ರಿಕಾ ವಿತರಕರಿಗೆ, ಏಜೆಂಟರಿಗೆ ಸೋಮವಾರ ಜಿಲ್ಲಾ ವರದಿಗಾರರ ಕೂಟದಲ್ಲಿ ಕೊರೊನಾ ನಿರೋಧಕ ಲಸಿಕೆ ಹಾಕಲಾಯಿತು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಲಸಿಕೆ ಪಡೆದವರಿಗೆ ಸೇಬು ಹಾಗೂ ಮಾವಿನ ಹಣ್ಣಿನ ಜ್ಯೂಸ್‌ ಪ್ಯಾಕೇಟ್ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯ ಮಹಾಂತೇಶ ದಾನಮ್ಮನವರ್, ಡಿಹೆಚ್‍ಒ ಡಾ.ನಾಗರಾಜ್, ಆರ್‌ಸಿಎಚ್‌ಒ ಡಾ. ಮೀನಾಕ್ಷಿ , ಕೂಟದ ಅಧ್ಯಕ್ಷ ಜಿ.ಎಂ.ಆರ್‌. ಆರಾಧ್ಯ, ಪದಾಧಿಕಾರಿಗಳು, ಸದಸ್ಯರು ಇದ್ದರು.

ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕೂಡ ಮಧ್ಯೆ ಭೇಟಿ ನೀಡಿ ಲಸಿಕೆ ಪಡೆದವರ ಆರೋಗ್ಯ ವಿಚಾರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು