ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಗಿರಿಯಲ್ಲಿ ಏಳು ಮಂದಿಗೆ ಕೊರೊನಾ ವೈರಸ್‌ ಸೋಂಕು

Last Updated 21 ಜೂನ್ 2020, 14:36 IST
ಅಕ್ಷರ ಗಾತ್ರ

ದಾವಣಗೆರೆ: ಚನ್ನಗಿರಿಯ ಏಳು ಮಂದಿ ಸೇರಿ ಜಿಲ್ಲೆಯಲ್ಲಿ ಒಟ್ಟು 8 ಮಂದಿಗೆ ವೈರಸ್‌ ಹರಡಿರುವುದು ಭಾನುವಾರ ದೃಢಪಟ್ಟಿದೆ.

ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಜೂನ್‌ 16ರಂದು ರಾತ್ರಿ ಮೃತಪಟ್ಟಿರುವ ಚನ್ನಗಿರಿಯ 56 ವರ್ಷದ ಮಹಿಳೆಯ ಸಂಪರ್ಕದಿಂದ (ಪಿ.7573) 31 ವರ್ಷದ ಯುವಕ (ಪಿ.8799), 58, 56, 60 ವರ್ಷದ ಮಹಿಳೆಯರು (ಪಿ.8801, ಪಿ.8803, ಪಿ.5804), 14 ವರ್ಷದ ಬಾಲಕ (ಪಿ. 8802), 59 ಮತ್ತು 47 ವರ್ಷದ ಪುರುಷರಿಗೆ (ಪಿ.8805, ಪಿ.8806) ಸೋಂಕು ಕಾಣಿಸಿಕೊಂಡಿದೆ.

ಆನೆಕೊಂಡ ಕಂಟೈನ್‌ಮೆಂಟ್‌ ವಲಯದ ಸಂಪರ್ಕದಿಂದ 39 ವರ್ಷದ ವ್ಯಕ್ತಿಗೆ ಸೋಂಕು ಬಂದಿದೆ.

ಶಿವಮೊಗ್ಗದಲ್ಲಿ ಮೃತಪಟ್ಟಿರುವ ಮಹಿಳೆಗೆ ಸೋಂಕು ಯಾರ ಸಂಪರ್ಕದಿಂದ ಬಂತು ಎಂಬುದು ಇನ್ನೂ ಗೊತ್ತಾಗಿಲ್ಲ.

ಜಿಲ್ಲೆಯಲ್ಲಿ ಒಟ್ಟು ದೃಢಪಟ್ಟ ಸೋಂಕಿತರ ಸಂಖ್ಯೆ 256 ಆಗಿದೆ. ಅದರಲ್ಲಿ 220 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ 29 ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT