ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡಿತರಕ್ಕೂ ಕೋವಿಡ್‌–19 ಭೀತಿ, ಸ್ಯಾನಿಟೈಸರ್‌ನಿಂದ ಕೈತೊಳೆಯುವುದು ಕಡ್ಡಾಯ

Last Updated 17 ಮಾರ್ಚ್ 2020, 9:58 IST
ಅಕ್ಷರ ಗಾತ್ರ

ದಾವಣಗೆರೆ: ಕೋವಿಡ್–19 ಭೀತಿ ಅಹಾರ ಇಲಾಖೆಗೂ ತಟ್ಟಿದೆ. ಇನ್ನು ಮುಂದೆ ಪಡಿತರ ಕೊಳ್ಳುವಾಗ ಸ್ಯಾನಿಟೈಸರ್‌ನಲ್ಲಿ ಕೈತೊಳೆಯುವುದು ಕಡ್ಡಾಯ.

ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಚ್ಚು ನೀಡುವಾಗ ವೈರಸ್ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಸೊಸೈಟಿಯ ಕಾರ್ಯದರ್ಶಿಗಳಿಗೆ ಆಹಾರ ಇಲಾಖೆ ಆಯುಕ್ತರ ಸೂಚನೆ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಪಡಿತರ ವಿತರಣೆ ಹಾಗೂ ಇಕೆವೈಸಿ ಸಂದರ್ಭದಲ್ಲಿ ಬಟ್ಟೆ ಹಾಗೂ ನೀರಿನಿಂದ ಕೈ ಶುಚಿಗೊಳಿಸಿಸುತ್ತಿದ್ದರು. ಈಗ ನ್ಯಾಯಬೆಲೆ ಅಂಗಡಿಗಳಲ್ಲೇ ಸ್ಯಾನಿಟೈಸರ್‌ ಇಡಲಿದ್ದು, ಅದನ್ನು ಕೈಗೆ ಹಚ್ಚಿಕೊಂಡು ಬರಬೇಕು. ಹೆಚ್ಚು ಜನ ಸಾಲಾಗಿ ನಿಲ್ಲಬಾರದು. ಅಂಗಡಿಗೆ ಬಂದ ತಕ್ಷಣ ಪಡಿತರ ಕೊಂಡುಹೋಗುವಂತೆ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ತಿಳಿಸಿದರು.

ಮಾಸ್ಕ್ ಹೆಚ್ಚಿನ ಬೆಲೆಗೆ ಮಾರಿದರೆ ಲೈಸೆನ್ಸ್ ರದ್ದು

ದಾವಣಗೆರೆ: ಅಗತ್ಯ ವಸ್ತುಗಳ ಕಾಯ್ದೆಯಡಿ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳು ಅಗತ್ಯ ವಸ್ತುಗಳು ಎಂದು ಗುರುತಿಸಿದ್ದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದರೆ ಆ ಮೆಡಿಕಲ್ ಸ್ಟೋರ್‌ಗಳ ಲೈಸೆನ್ಸ್‌ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ‘ಕೆಲವೊಂದು ಮೆಡಿಕಲ್‌ ಸ್ಟೋರ್‌ಗಳಲ್ಲಿ ಮುಖಗವಸು ಹಾಗೂ ಸ್ಯಾನಿಟೈಸರ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಅಲ್ಲದೇ ಕೃತಕ ಅಭಾವ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು

ಕಾನೂನು ಮಾಪನಶಾಸ್ತ್ರ, ಕೇಂದ್ರ ಸರ್ಕಾರ ಹಾಗೂ ಆಹಾರ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ಈ ಕ್ರಮ ಕೈಗೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT