ಹೊನ್ನಾಳಿ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪತ್ನಿ ಸುಮಾ ಅವರೊಂದಿಗೆಕೋವಿಡ್ ಕೇಂದ್ರದಲ್ಲಿ ವಾಸ್ತವ್ಯ ಮಾಡುವ ಮೂಲಕ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಿದರು.

ತಾಲ್ಲೂಕಿನ ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ಗುರುವಾರ ರಾತ್ರಿ ವಾಸ್ತವ್ಯ ಹೂಡಿರುವಶಾಸಕರು, ಶನಿವಾರದವರೆಗೂ ಇಲ್ಲಿಯೇ ಇರಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ವಾಸ್ತವ್ಯ ಮಾಡಿದ್ದು, ಇದೊಂದು ವಿಶೇಷ ಅನುಭವವಾಗಿದೆ. ಇಲ್ಲಿ ವಾಸ್ತವ್ಯ ಮಾಡುವುದರಿಂದ ಸೋಂಕಿತರು ಸೇವಿಸುವ ಆಹಾರದ ಗುಣಮಟ್ಟದ ಜೊತೆಗೆ, ಸಿಬ್ಬಂದಿ ಹೇಗೆ ಕೆಲಸ ಮಾಡುತ್ತಾರೆ ಎಂಬುದೂ ತಿಳಿಯಿತು.ಸೋಂಕಿತರಿಗೆ ಮನರಂಜನೆ ನೀಡುವ ಮೂಲಕ ಆತ್ಮಸ್ಥೈರ್ಯ ತುಂಬಲು ಮತ್ತು ಸೋಂಕಿತರ ನೋವು ಕಡಿಮೆ ಮಾಡುವ ಉದ್ದೇಶಕ್ಕಾಗಿ ಸಂಗೀತ ಸಂಜೆ ಹಮ್ಮಿಕೊಳ್ಳಲಾಗಿದೆ’ ಎಂದರು.

ಬೆಳಿಗ್ಗೆ ಯೋಗಾಭ್ಯಾಸ ಮಾಡಿದ ಶಾಸಕರು, ಅಡುಗೆ ಸಿಬ್ಬಂದಿಯೊಂದಿಗೆ ಸೇರಿ ತಿಂಡಿ ತಯಾರಿಸಿದರು. ಸೋಂಕಿತರಿಗೆ ಉಪಾಹಾರ ಬಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.