ಭಾನುವಾರ, ಜುಲೈ 25, 2021
28 °C

ಕೊರೊನಾ: ಗುಣಮುಖರಾಗಿ 10 ಮಂದಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕೊರೊನಾ ವೈರಸ್‌ ಸೋಂಕಿನಿಂದ ಗುಣಮುಖರಾಗಿ ಭಾನುವಾರ 10 ಮಂದಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಭಾನುವಾರ ಸೋಂಕು ಇರುವ ಪ್ರಕರಣ ಪತ್ತೆಯಾಗಿಲ್ಲ.

24 ಪ್ರಕರಣಗಳು ನೆಗೆಟಿವ್‌ ಎಂದು ಫಲಿತಾಂಶ ಬಂದಿದೆ. ಭಾನುವಾರ 82 ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದೂ ಒಳಗೊಂಡಂತೆ 478 ಮಾದರಿಗಳ ಫಲಿತಾಂಶ ಬರಲು ಬಾಕಿ ಇದೆ.

ಜಿಲ್ಲೆಯಲ್ಲಿ ಈವರೆಗೆ 226 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ 194 ಮಂದಿ ಬಿಡುಗಡೆಗೊಂಡಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ 26 ಪ್ರಕರಣಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು