ಶುಕ್ರವಾರ, ಜೂನ್ 5, 2020
27 °C

ದಾವಣಗೆರೆಯಲ್ಲಿ ಬಾಲಕಿ ಸೇರಿ ಮೂವರಿಗೆ ಕೋವಿಡ್‌-19

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲೆಯಲ್ಲಿ ಬಾಲಕಿ ಸೇರಿ ಮೂವರಿಗೆ ಕೋವಿಡ್‌–19 ರೋಗ ಇರುವುದನ್ನು ಶುಕ್ರವಾರ ಬಂದ ವೈದ್ಯಕೀಯ ವರದಿ ಖಚಿತಪಡಿಸಿದೆ.

ಜಾಲಿನಗರದ 15 ವರ್ಷದ ಸೋಂಕಿತ ಬಾಲಕನ (ಪಿ–1483) ಸಂಪರ್ಕದಿಂದ 42 ವರ್ಷದ ಮಹಿಳೆ (ಪಿ-1656), 14 ವರ್ಷದ ಬಾಲಕಿ (ಪಿ-1657) ಹಾಗೂ 18 ವರ್ಷದ ಯುವಕನಿಗೆ (ಪಿ–1658) ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣದ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 14 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್‌ನಿಂದ ನಾಲ್ವರು ಮೃತಪಟ್ಟಿದ್ದಾರೆ. 100 ಕೋವಿಡ್‌ ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು