ಶನಿವಾರ, ಜೂಲೈ 4, 2020
22 °C

ಧಾರವಾಡ: ಎರಡು ಹೊಸ ಕೋವಿಡ್-19 ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಧಾರವಾಡದ ಜಿಲ್ಲೆಯಲ್ಲಿ ಸೋಮವಾರ ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಪಿ-3397 (47 ವರ್ಷ, ಪುರುಷ) ಇವರು ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದವರಾಗಿದ್ದು, ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದ ಬಳಲುತ್ತ ಎಸ್ ಡಿ ಎಂ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಕೋವಿಡ್ ಪಾಸಿಟಿವ್ ದೃಢಪಟ್ಟ ನಂತರ ಕಿಮ್ಸ್ ಗೆ ದಾಖಲಿಸಲಾಗಿದೆ.  

ಪಿ-3398 ( 25 , ಪುರುಷ ) ಇವರು ಹುಬ್ಬಳ್ಳಿ ಶಹರ ನಿವಾಸಿಯಾಗಿದ್ದಾರೆ, ಬೆಂಗಳೂರು ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.
 
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಈಗಾಗಲೇ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು