ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಜೀವನದ ಪಾಠ ಕಲಿಸಿದೆ: ನಿರಂಜನಾನಂದಪುರಿ ಸ್ವಾಮೀಜಿ

ಕಾಗಿನೆಲೆ ಕನಕ ಗುರುಪೀಠದ
Last Updated 24 ಜೂನ್ 2021, 5:00 IST
ಅಕ್ಷರ ಗಾತ್ರ

ಹೊನ್ನಾಳಿ: ಕೋವಿಡ್ ಮನುಷ್ಯನಿಗೆ ಜೀವನದ ಪಾಠ ಕಲಿಸಿದೆ. ಮನುಷ್ಯ ಪ್ರಕೃತಿಯಲ್ಲಾಗುವ ಏರುಪೇರುಗಳನ್ನು ಗುರುತಿಸಿ ಅವುಗಳೊಂದಿಗೆ ಹೇಗೆ ಬದುಕಬೇಕು ಎಂಬುದನ್ನು ಕಲಿಸಲು ಹೊರಟಿದೆ. ಈ ಸೂಕ್ಷ್ಮಗಳನ್ನು ಅರಿತುಕೊಂಡು ಮನುಷ್ಯ ತಾನು ಮತ್ತು ತನ್ನ ಸುತ್ತಲಿನ ಸಮಾಜದೊಂದಿಗೆ ಹೊಂದಿಕೊಂಡು ಸಹಬಾಳ್ವೆ ನಡೆಸಿದಾಗ ಮಾತ್ರ ನೆಮ್ಮದಿಯ ಜೀವನ ಕಾಣಲು ಸಾಧ್ಯ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು.

ಬುಧವಾರ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಆರ್. ಮಹೇಶ್ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಆಟೊ ಚಾಲಕರಿಗೆ ಆಹಾರದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉಳ್ಳವರು ತಮ್ಮ ಹುಟ್ಟುಹಬ್ಬ, ಮದುವೆ ಸಮಾರಂಭಗಳನ್ನು ಬಡವರಿಗೆ, ನಿರ್ಗತಿಕರಿಗೆ ದಾನ ಮಾಡುವ ಮೂಲಕ ಆಚರಿಸಿಕೊಂಡರೆ ಅರ್ಥಪೂರ್ಣವಾಗುತ್ತದೆ. ಈ ನಿಟ್ಟಿನಲ್ಲಿ ಎಂ.ಆರ್. ಮಹೇಶ್ ಅವರ ನಡೆ ಅನುಕರಣೀಯ
ಎಂದು ಹೇಳಿದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ‘ಸಾರ್ವಜನಿಕರು ಕರೊನಾ ಕುರಿತು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೋವಿಡ್ ಹಿಮ್ಮೆಟ್ಟಿಸಬೇಕಾಗಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಆರ್. ಮಹೇಶ್, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಜೆ.ಕೆ. ಸುರೇಶ್, ಪುರಸಭಾ ಅಧ್ಯಕ್ಷರು ಮತ್ತು ಸದಸ್ಯರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತರಾಜ್ ಪಾಟೀಲ್, ಕಾರ್ಯದರ್ಶಿ ಅರಕೆರೆ ನಾಗರಾಜ್ ಸೇರಿ ಹಲವು ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT