ಗುರುವಾರ , ಮಾರ್ಚ್ 23, 2023
30 °C

ಕೋವಿಡ್‍ ನಿಯಮ ಮಾಯ: ಹರಿಹರದ ಶಾಸಕ ಎಸ್‌. ರಾಮಪ್ಪ ಮಗಳ ಮದುವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಿಹರ: ನಗರದ ಸಿದ್ದೇಶ್ವರ ಕಲ್ಯಾಣಮಂಟಪದಲ್ಲಿ ಶಾಸಕ ಎಸ್‍. ರಾಮಪ್ಪ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶುಕ್ರವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಂದಾಗ ಕಾಂಗ್ರೆಸ್‍ ಕಾರ್ಯಕರ್ತರು ಅಂತರ ಮರೆತು ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂಬ ಘೋಷಣೆಗಳೊಂದಿಗೆ ಸ್ವಾಗತಿಸಿದರು.

ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವರಾದ ಎಸ್‍.ಎಸ್‍. ಮಲ್ಲಿಕಾರ್ಜುನ್‍ ಹಾಗೂ ಪಿ.ಟಿ. ಪರಮೇಶ್ವರನಾಯ್ಕ್‌ ಸಾಥ್‍ ನೀಡಿದರು. ಗಣ್ಯರು ವೇದಿಕೆಗೆ ಆಗಮಿಸಿ ವಧು-ವರರನ್ನು ಹರಸಿದರು.

ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರುತ್ತಿದ್ದಂತೆ ನೂಕುನುಗ್ಗಲು ಏರ್ಪಟ್ಟಿತು. ಅಂತರ ಮರೆತ ಹಾಗೂ ಮಾಸ್ಕ್‌ ಧರಿಸದ ಅನೇಕ ಕಾರ್ಯಕರ್ತರು ಸಿದ್ದರಾಮಯ್ಯ ಅವರನ್ನು ನೋಡಲು ಮುಗ್ಗಿಬಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು