ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ

Last Updated 13 ಮೇ 2021, 9:08 IST
ಅಕ್ಷರ ಗಾತ್ರ

ದಾವಣಗೆರೆ: ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವವರನ್ನು ಫ್ರಂಟ್‍ಲೈನ್ ವಾರಿಯರ್ಸ್ ಎಂದು ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಬುಧವಾರ ದಾವಣಗೆರೆ ಪ್ರೆಸ್‌ಕ್ಲಬ್‌ನಲ್ಲಿ ಕೋವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಯಿತು.

ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು, ಫೋಟೊಗ್ರಾಫರ್, ವಿಡಿಯೋಗ್ರಾಫರ್‌ಗಳು ಹಾಗೂ ವಾರ್ತಾ ಇಲಾಖೆ ಸಿಬ್ಬಂದಿ ಸೇರಿ 129 ಮಂದಿ ಲಸಿಕೆ ಪಡೆದರು.

ಸಂಸದ ಜಿ.ಎಂ.ಸಿದ್ದೇಶ್ವರ, ಪಾಲಿಕೆ ಆಯುಕ್ತ ಎಸ್.ಟಿ. ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಡಿಎಚ್‍ಒ ಡಾ.ನಾಗರಾಜ, ಆರ್‌ಸಿಎಚ್‌ಒ ಡಾ.ಮೀನಾಕ್ಷಿ ಮೇಲ್ವಿಚಾರಣೆ ಮಾಡಿದರು ಎಂದು ವಾರ್ತಾಧಿಕಾರಿ ಅಶೋಕ್‍ಕುಮಾರ್ ಡಿ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT