ದಾವಣಗೆರೆ: ಮನೆಯ ಬೀಗ ಒಡೆದು ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬಂಧಿಸಿರುವ ಚನ್ನಗಿರಿ ಠಾಣೆ ಪೊಲೀಸರು ಬಂಧಿತನಿಂದ ₹4.50 ಲಕ್ಷ ಮೌಲ್ಯದ 89.52 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಚನ್ನಗಿರಿಯ ವಡ್ನಾಳ್ ರಾಜಣ್ಣ ಬಡಾವಣೆಯ ನಿವಾಸಿ ಮಹಮ್ಮದ್ ಗೌಸ್ ಎಸ್. ಬಂಧಿತ ಆರೋಪಿ.

ಅಕ್ಟೋಬರ್ 14ರಂದು ಚನ್ನಗಿಯ ಕಾಳಮ್ಮನ ಬೀದಿಯಲ್ಲಿರುವ ಜ್ಯೋತಿ –ಮಂಜುನಾಥ್ ಅವರ ಮನೆಯ ಬೀಗ ಒಡೆದು ಬಂಗಾರ, ಬೆಳ್ಳಿ ಆಭರಣ ಹಾಗೂ ₹ 1 ಲಕ್ಷವನ್ನು ಕಳ್ಳತನ ಮಾಡಲಾಗಿತ್ತು. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಧಿತ ಆರೋಪಿ ವಿರುದ್ಧ ಚಿತ್ರದುರ್ಗ ನಗರ ಹಾಗೂ ಹೊಳಲ್ಕೆರೆ ಠಾಣೆಗಳಲ್ಲೂ ಪ್ರಕರಣ ದಾಖಲಾಗಿವೆ.

ಡಿವೈಎಸ್ಪಿ ಪ್ರಶಾಂತ್ ಜಿ. ಮುನ್ನೋಳಿ ಮಾರ್ಗದರ್ಶನದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ನಿರಂಜನ ಬಿ. ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಪಿ.ಎಸ್.ಐ. ಮಂಜುನಾಥ ಎಸ್. ಕಲ್ಲೇದವರ್, ಎ.ಎಸ್.ಐ. ಶಶಿಧರ್ ಮತ್ತು ಸಿಬ್ಬಂದಿಯಾದ ರುದ್ರೇಶ್, ಬಿರೇಶ್ ಪುಟ್ಟಕ್ಕನವರ್, ನರೇಂದ್ರ ಸ್ವಾಮಿ, ಶ್ರೀನಿವಾಸಮೂರ್ತಿ, ರಮೇಶ, ರಂಗಪ್ಪ, ರೇವಣಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.