ದಾವಣಗೆರೆ: ಮೆಕ್ಕೆಜೋಳ ಮತ್ತು ಭತ್ತ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ರಾಜ್ಯದಾದ್ಯಂತ ಹಂತಹಂತವಾಗಿ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಡಿ.8ರಂದು ಬೆಳಗಾವಿ ಸುವರ್ಣಸೌಧ ಚಲೊ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು.

‘ಮೆಕ್ಕೆಜೋಳ ಹಾಗೂ ಭತ್ತ ಬೆಳೆಗಾರರ ನೆರವಿಗೆ ಧಾವಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಹಮ್ಮಿಕೊಂಡಿರುವ ಹೋರಾಟಕ್ಕೆ ನ.25ರಂದು ದಾವಣಗೆರೆಯಲ್ಲಿ ಚಾಲನೆ ದೊರೆಯಲಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನ.27 ಮತ್ತು 28ರಂದು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಡಿ.1 ಮತ್ತು 2ರಂದು ಹೋರಾಟ ನಡೆಯಲಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಕ್ವಿಂಟಲ್ ಮೆಕ್ಕೆಜೋಳಕ್ಕೆ ಕೇಂದ್ರ ಸರ್ಕಾರ ₹2,400 ಬೆಲೆ ನಿಗದಿಪಡಿಸಿದೆ. ಖರೀದಿ ಕೇಂದ್ರ ತೆರೆಯಲು ನ.12ರಂದು ರಾಜ್ಯಗಳಿಗೆ ಸೂಚಿಸಿದೆ. ಹೊಣೆಗಾರಿಕೆ ಮರೆತಿರುವ ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆಯಲು ವಿಳಂಬ ಮಾಡುತ್ತಿದೆ. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬೆಲೆ ಕುಸಿತವಾಗಿದ್ದು, ಕ್ವಿಂಟಲ್ ಮೆಕ್ಕೆಜೋಳವನ್ನು ₹1,700ಕ್ಕಿಂತ ಕಡಿಮೆ ಬೆಲೆಗೆ ಖರೀದಿಸಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಕ್ಕರೆ ಕಾರ್ಖಾನೆ ಸ್ವಾಧೀನಕ್ಕೆ ಆಗ್ರಹ

‘ಸಕ್ಕರೆ ಪ್ರಮಾಣ, ಎಥೆನಾಲ್ ಸೇರಿದಂತೆ ಉಪ ಉತ್ಪನ್ನಗಳನ್ನು ಪರಿಗಣಿಸಿ ಪ್ರತಿ ಟನ್ ಕಬ್ಬಿಗೆ ಕೇಂದ್ರ ಸರ್ಕಾರ ₹ 3,550 ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ (ಎಫ್ಆರ್ಪಿ) ನಿಗದಿಪಡಿಸಿದೆ. ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರತಿ ಟನ್ ಕಬ್ಬಿಗೆ ₹ 3,350 ನಿಗದಿಪಡಿಸಿದೆ. ರಾಜ್ಯದ ಯಾವುದೇ ಸಕ್ಕರೆ ಕಾರ್ಖಾನೆ ಸರ್ಕಾರ ನಿಗದಿಪಡಿಸಿದ ಬೆಲೆ ನೀಡುತ್ತಿಲ್ಲ. ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರ ಮರ್ಜಿಗೆ ಒಳಗಾಗಿದೆ’ ಎಂದು ಆರೋಪಿಸಿದರು.

‘ಕಬ್ಬು ಬೆಳೆಗಾರರು ಎರಡು ತಿಂಗಳಿಂದ ಎಫ್ಆರ್ಪಿಗೆ ಹೋರಾಟ ನಡೆಸುತ್ತಿದ್ದಾರೆ. ನ್ಯಾಯಯುತ ಬೆಲೆ ಸಿಗದ ಪರಿಣಾಮ ಕರ್ನಾಟಕದ ಕಬ್ಬು ಪಕ್ಕದ ಮಹಾರಾಷ್ಟ್ರ ಸಕ್ಕರೆ ಕಾರ್ಖಾನೆಗಳ ಪಾಲಾಗುತ್ತಿದೆ. ಬೆಲೆ ನಿಗದಿಪಡಿಸಿದ ಸರ್ಕಾರ, ಅನುಷ್ಠಾನಕ್ಕೂ ಬದ್ಧತೆ ತೋರಬೇಕು. ಕಾರ್ಖಾನೆಗಳ ಮೂಗು ಹಿಡಿದು ರೈತರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದರೆ, ಸಕ್ಕರೆ ಕಾರ್ಖಾನೆಗಳನ್ನು ಸ್ವಧೀನಕ್ಕೆ ಪಡೆದು ಬದ್ಧತೆ ಪ್ರದರ್ಶಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ವಕ್ತಾರ ಕೊಳೇನಹಳ್ಳಿ ಬಿ.ಎಂ. ಸತೀಶ್, ಮುಖಂಡರಾದ ರಘು ಅಂಬರಕರ್, ಪಿ.ಸಿ. ಶ್ರೀನಿವಾಸ್, ಧನಂಜಯ ಕಡ್ಲೇಬಾಳ್, ಮಂಜಾ ನಾಯ್ಕ ಹಾಜರಿದ್ದರು.

ಶ್ವೇತಪತ್ರಕ್ಕೆ ಆಗ್ರಹ

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆ ಕೂಡ ಈಡೇರಿಸಿಲ್ಲ. ಸರ್ಕಾರ ಅನುಷ್ಠಾನಗೊಳಿಸಿದ ಜನಪರ ಯೋಜನೆಗಳಿಗೆ ಮಾಡಿದ ವೆಚ್ಚದ ಬಗ್ಗೆ ಶ್ವೇತಪತ್ರ ಹೊರಡಿಸಲಿ’ ಎಂದು ಸಿ.ಟಿ. ರವಿ ಸವಾಲು ಹಾಕಿದರು.

‘ಕೃಷಿ ಬೆಲೆ ಆಯೋಗದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಆಶ್ವಾಸನೆ ಕೂಡ ಪೊಳ್ಳಾಗಿದೆ. ರೈತರು, ಕಾರ್ಮಿಕರು ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ ಎಷ್ಟು ನೀಡಿದ್ದೀರಿ ಎಂಬುದನ್ನು ಸ್ಪಷ್ಟಪಡಿಸಿ’ ಎಂದು ಒತ್ತಾಯಿಸಿದರು.

‘ಕುರ್ಚಿ ಕಳ್ಳಾಟ, ತಳ್ಳಾಟ ಬಿಡಿ’

‘ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ರೈತರ ಬಗ್ಗೆ ಸರ್ಕಾರಕ್ಕೆ ಕನಿಷ್ಠ ಕಾಳಜಿ ಇಲ್ಲ. ಕುರ್ಚಿಗಾಗಿ ನಡೆಯುತ್ತಿರುವ ಕಳ್ಳಾಟ– ತಳ್ಳಾಟ ಬಿಟ್ಟು ರೈತರ ಕಡೆ ಗಮನ ಕೊಡಿ’ ಎಂದು ಸಿ.ಟಿ. ರವಿ ಆಗ್ರಹಿಸಿದರು.

‘ರಾಜ್ಯದ ಹಲವು ಜಿಲ್ಲೆಯ ರೈತರು ಹೈನುಗಾರಿಕೆ ಅವಲಂಬಿಸಿದ್ದಾರೆ. ಹೈನುಗಾರಿಕೆ ಪ್ರೋತ್ಸಾಹಕ್ಕೆ ಘೋಷಣೆ ಮಾಡಿದ ಸಹಾಯಧನದ ಬಾಕಿ ಉಳಿಸಿಕೊಳ್ಳಲಾಗಿದೆ. ಭದ್ರಾ ನಾಲೆಯ ಆಧುನೀಕರಣದ ಬದಲಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮನೆಗಳು ನವೀಕರಣಗೊಂಡಿವೆ’ ಎಂದು ದೂರಿದರು.

ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿ ಕೇಂದ್ರದ ಬದಲು ಶಾಸಕರ ಖರೀದಿ ಕೇಂದ್ರ ತೆರೆದಿದೆ. ಶಾಸಕರ ಗ್ರೇಡ್ ಮೇಲೆ ಎಫ್ಆರ್ಪಿ ನಿಗದಿಯಾಗುತ್ತಿದೆ
ಸಿ.ಟಿ. ರವಿ, ವಿಧಾನಪರಿಷತ್ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.