ದಾವಣಗೆರೆ: ಸದನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ ದೂರು ಪರಿಶೀಲಿಸಿ ಸದನದ ಪರಿಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

‘ಡಿ.19ರಂದು ಸದನದಲ್ಲಿ ನಡೆದ ಬೆಳವಣಿಗೆಯನ್ನು ಗಮನಿಸಿದ್ದೇನೆ. ದಾಖಲೆಗಳು ಪರಿಶೀಲಿಸಿದ್ದೇನೆ. ಇದನ್ನು ಬೆಳೆಸುವುದರಲ್ಲಿ ಅರ್ಥವಿಲ್ಲ. ಇದು ಇಲ್ಲಿಗೆ ಮುಗಿಯಲಿ ಎಂಬುದು ನನ್ನ ಅಪೇಕ್ಷೆ’ ಎಂದು ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿದರು.

‘ವಿಧಾನಪರಿಷತ್ನಲ್ಲಿ ಇರುವ ಸಿ.ಸಿ.ಟಿವಿ ಕ್ಯಾಮೆರಾ ಹಾಗೂ ಆಡಿಯೊ ಅಧಿಕೃತ ದಾಖಲೆಗಳು. ಖಾಸಗಿ ಸುದ್ದಿವಾಹಿನಿಯಲ್ಲಿ ಭಿತ್ತರವಾದ ದೃಶ್ಯಗಳ ಬಗ್ಗೆ ಮಾಹಿತಿ ಇಲ್ಲ. ಈ ದೃಶ್ಯಗಳನ್ನು ನೀಡಿದರೆ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಖಚಿತಪಡಿಸಿಕೊಳ್ಳಲಾಗುವುದು’ ಎಂದರು.
.ದೇವರಿಗೆ ಹರಕೆ ಹೊತ್ತಿದ್ದೇನೆ, ತನಿಖೆ ಮುಗಿದ ಮೇಲೆ ತೀರಿಸ್ತೇನೆ: ಸಿ.ಟಿ.ರವಿ.ಸಿ.ಟಿ.ರವಿ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ: ಈಶ್ವರಪ್ಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.