ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆಯಲ್ಲಿ ಬಾಡಿಗೆ ಸೈಕಲ್‌ ಸೇವೆ ಶೀಘ್ರ

Last Updated 7 ಏಪ್ರಿಲ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ದಾವಣಗೆರೆಯಲ್ಲಿ ಪಬ್ಲಿಕ್‌ ಬೈಸಿಕಲ್‌ ಶೇರಿಂಗ್‌ (ಪಿಬಿಎಸ್‌) ವ್ಯವಸ್ಥೆ ಜಾರಿಗೆ ತರಲು ಸೈನ್‌ಪೋಸ್ಟ್‌ ಇಂಡಿಯಾ ಕಂಪನಿ ಮುಂದಾಗಿದೆ.

ದಾವಣಗೆರೆ ಸ್ಮಾರ್ಟ್‌ಸಿಟಿಯಲ್ಲಿ ಮುಂದಿನ ಹತ್ತು ವರ್ಷಗಳವರೆಗೆ ಕಂಪನಿಯು ಈ ಸೇವೆ ನೀಡಲಿದೆ. ಎಲೆಕ್ಟ್ರಿಕ್‌ ಸೈಕಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ಒದಗಿಸುವ ಈ ಸೇವೆಯನ್ನು ಮೊಬೈಲ್‌ ಫೋನ್‌ ಆ್ಯಪ್‌ ಮೂಲಕ ಪಡೆಯಬಹುದಾಗಿದೆ ಎಂದು ಕಂಪನಿ ಹೇಳಿದೆ.

ಮಹಾರಾಷ್ಟ್ರದ ಥಾಣೆ ಹಾಗೂ ಛತ್ತೀಸಗಡದ ನಯಾ ರಾಯ್‌ಪುರದ ನಂತರ, ಕರ್ನಾಟಕದ ದಾವಣಗೆರೆಯಲ್ಲಿ ಈ ಸೇವೆಯನ್ನು ಜಾರಿಗೆ ತರಲಾಗುತ್ತಿದೆ. ಹತ್ತು ಸಾವಿರ ಮಂದಿ ಇದರ ಪ್ರಯೋಜನ ಪಡೆದುಕೊಳ್ಳುವ ನಿರೀಕ್ಷೆಯಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀಪಾದ ಆಶ್ತೇಕರ್‌ ಹೇಳಿದ್ದಾರೆ.

‘ಪರಿಸರ ಮಾಲಿನ್ಯ ನಿಯಂತ್ರಿಸುವಲ್ಲಿ ಈ ಸೇವೆ ಪ್ರಮುಖ ಪಾತ್ರ ವಹಿಸಲಿದೆ. ದಾವಣಗೆರೆಯಲ್ಲಿ 20 ನಿಲುಗಡೆ ಪ್ರದೇಶ ಗುರುತಿಸಲಾಗಿದ್ದು, ಇದಕ್ಕಾಗಿ 200 ಸೈಕಲ್‌ಗಳನ್ನು ಒದಗಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಆಗಸ್ಟ್‌ನಿಂದ ಈ ಸೇವೆಯನ್ನು ಪ್ರಾರಂಭಿಸಲಾಗುವುದು. ಮೊಬೈಲ್‌ ಫೋನ್‌ ತಂತ್ರಜ್ಞಾನದ ಸಹಾಯದಿಂದ ಈ ಸೇವೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT