ಚನ್ನಗಿರಿ: ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಮಾರುತಿ ಓಮಿನಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ಒಂದೇ ಕುಟುಂಬದ ವಾಸಿಗಳಾದ ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಮೃತಪಟ್ವರು. ರತ್ನಮ್ಮ ಅವರಿಗೆ ತೀವ್ರ ಗಾಯಗಳಾಗಿವೆ. ಇವರು ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದಾಗ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.