ದಾವಣಗೆರೆ: ಜಗಳೂರಿನಲ್ಲಿ ಜ.11 ಮತ್ತು 12ರಂದು ನಡೆಯಲಿರುವ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಚಿಂತಕ ಪ್ರೊ. ಎ.ಬಿ.ರಾಮಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಮ್ಮೇಳನಾಧ್ಯಕ್ಷರ ಆಯ್ಕೆಯ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಾಮದೇವಪ್ಪ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕಾರಿ ಸಮಿತಿಯ ಹಲವು ಸದಸ್ಯರು ರಾಮಚಂದ್ರಪ್ಪ ಅವರ ಹೆಸರು ಸೂಚಿಸಿದರು. ಕೂಲಂಕಷ ಚರ್ಚೆಯ ಬಳಿಕ ತೀರ್ಮಾನ ಕೈಗೊಳ್ಳಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಮೂರು ದಶಕಗಳಿಗೂ ಹೆಚ್ಚು ಕಾಲ ಕನ್ನಡದ ಪ್ರಾಧ್ಯಾಪಕರಾಗಿದ್ದ ರಾಮಚಂದ್ರಪ್ಪ ಅವರು ನಿವೃತ್ತಿ ಜೀವನ ನಡೆಸುತ್ತಿದ್ದಾರೆ. ಸಾಂಸ್ಕೃತಿಕ ಚಿಂತಕರಾಗಿ ಗುರುತಿಸಿಕೊಂಡಿದ್ದು, 19 ಕೃತಿಗಳನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿರುವ ಅವರು ಜನಪರ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.