ದಾವಣಗೆರೆ: ‘ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವುದೂ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ್ 9ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್ ತಿಳಿಸಿದರು.

‘ಅಂದು ಬೆಳಿಗ್ಗೆ ರಾಜ್ಯದ ವಿವಿಧೆಡೆಯಿಂದ 50 ಸಾವಿರಕ್ಕೂ ಅಧಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ರೈತರ ಸಮಸ್ಯೆ ಪರಿಹರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಜಿಲ್ಲೆಯಿಂದ 1 ಸಾವಿರಕ್ಕೂ ಅಧಿಕ ಜನರು ಸುವರ್ಣ ಸೌಧ ಮುತ್ತಿಗೆ ಹೋರಾಟದಲ್ಲಿ ಭಾಗಿಯಾಗುತ್ತಿದ್ದೇವೆ. ರೈತ ವಿರೋಧಿ, ಜನ ವಿರೋಧಿ, ಹಿಂದೂ ವಿರೋಧಿಯಾದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಿದ ಪರಿಣಾಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಕ್ಕೆಜೋಳ ಖರೀದಿಸುವಂತೆ ಡಿಸ್ಟಿಲರಿಗಳಿಗೆ ಪತ್ರ ಬರೆದರು’ ಎಂದು ಹೇಳಿದರು.

‘ರಾಜ್ಯದಲ್ಲಿ 70 ಲಕ್ಷ ಟನ್ಗೂ ಅಧಿಕ ಮೆಕ್ಕೆಜೋಳವನ್ನು ರೈತರು ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಕೇವಲ ₹1,600 ರಿಂದ ₹1,800 ದರ ಇದೆ. ಈವರೆಗೆ ರಾಜ್ಯದ ಯಾವುದೇ ಭಾಗದಲ್ಲೂ ಸರ್ಕಾರ ಖರೀದಿ ಕೇಂದ್ರ ಸ್ಥಾಪಿಸಿಲ್ಲ. ತಕ್ಷಣವೇ ಬೆಂಬಲ ಬೆಲೆ ಜೊತೆಗೆ ಪ್ರೋತ್ಸಾಹಧನವನ್ನೂ ಸೇರಿಸಿ, ರಾಜ್ಯ ಸರ್ಕಾರ ಖರೀದಿ ಕೇಂದ್ರ ಸ್ಥಾಪಿಸುವ ಮೂಲಕ ರೈತರು ಬೆಳೆದ ಎಲ್ಲಾ ಮೆಕ್ಕೆಜೋಳವನ್ನು ಖರೀದಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದರು.

ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಪಕ್ಷದ ಮುಖಂಡರಾದ ಚಂದ್ರಶೇಖರ ಪೂಜಾರ, ಬಿ.ಎಂ.ಸತೀಶ್ ಕೊಳೇನಹಳ್ಳಿ, ಧನಂಜಯ ಕಡ್ಲೇಬಾಳು, ಕೊಟ್ರೇಶ ಗೌಡ, ರಾಜು ವೀರಣ್ಣ, ಪ್ರವೀಣ ಜಾಧವ್, ಪಂಜು ಪೈಲ್ವಾನ್, ಮಂಜುನಾಥ, ರವಿಗೌಡ, ವೆಂಕಟೇಶ, ಚೇತನ್, ಅಜಯ್, ತಿಪ್ಪೇಸ್ವಾಮಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.