ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಾಪಟ್ಟಣ | ಟ್ರ್ಯಾಕ್ಟರ್ ಡಿಕ್ಕಿ; ಬೈಕ್ ಸವಾರ ಸಾವು

Published 20 ಮಾರ್ಚ್ 2024, 15:45 IST
Last Updated 20 ಮಾರ್ಚ್ 2024, 15:45 IST
ಅಕ್ಷರ ಗಾತ್ರ

ಬಸವಾಪಟ್ಟಣ: ಇಲ್ಲಿನ ದಾಗಿನಕಟ್ಟೆ ರಸ್ತೆಯಲ್ಲಿ ಬೈಕ್‌ಗೆ ಟ್ರ್ಯಾಕ್ಟರ್‌ ಡಿಕ್ಕಿ ಹೊಡೆದು ಸಮೀಪದ ಬೆಳಲಗೆರೆ ಗ್ರಾಮದ ವಿದ್ಯಾರ್ಥಿ ಮನುಕುಮಾರ್‌ (17) ಮೃತಪಟ್ಟಿದ್ದಾರೆ.

ಸೋಮವಾರ ಮಧ್ಯಾಹ್ನ ಅಪಘಾತ ನಡೆದಿದ್ದು, ತೀವ್ರವಾಗಿ ಗಾಯಗೊಂಡ ಬಾಲಕನನ್ನು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಕೂಡಲೇ ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಿದರು. ಮಂಗಳವಾರ ಸಂಜೆ ಮೃತಪಟ್ಟಿದ್ದಾನೆ.

ಬೆಳಲಗೆರೆಯ ಬಡಗಿ ದೊಡ್ಡಪ್ಪ ಅವರ ಪುತ್ರ ಮನುಕುಮಾರ್‌ ದಾಗಿನಕಟ್ಟೆಯ ಕೆಂಗಪ್ಪನಾಯಕ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸೋಮವಾರ ತರಗತಿಗಳು ಮುಗಿದ ನಂತರ ಬೈಕ್‌ನಲ್ಲಿ ಸ್ವಗ್ರಾಮಕ್ಕೆ ಹಿಂತಿರುಗುವಾಗ ಅಪಘಾತವಾಗಿದೆ. ಬಸವಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT