ದಾವಣಗೆರೆ: ‘ರಸಗೊಬ್ಬರವನ್ನು ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ. ಕೃತಕ ಅಭಾವ ಸೃಷ್ಟಿಸುವ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕಿ ಜಿ.ವಿ. ಭಾರತಮ್ಮ ಎಚ್ಚರಿಕೆ ನೀಡಿದರು.

ಇಲ್ಲಿನ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ರಸಗೊಬ್ಬರ, ಕೀಟನಾಶಕ, ಬಿತ್ತನೆಬೀಜ ಮಾರಾಟಗಾರರಿಗೆ ಬುಧವಾರ ಏರ್ಪಡಿಸಿದ್ದ ಮುಂಗಾರು ಪೂರ್ವ ತರಬೇತಿ ಮತ್ತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ರೈತರಿಗೆ ಅಗತ್ಯವಿರುವ ರಸಗೊಬ್ಬರ ದಾಸ್ತಾನು ಇದೆ. ರಸಗೊಬ್ಬರಕ್ಕೆ ಕೊರತೆ ಉಂಟಾಗುವುದಿಲ್ಲ. ಮಾರಾಟ ಮಾಡುವಾಗ ರೈತರಿಂದ ಅಗತ್ಯ ದಾಖಲೆ ಪಡೆದುಕೊಳ್ಳಬೇಕು. ಇದಕ್ಕೆ ಪ್ರತಿಯಾಗಿ ಬಿಲ್ಗಳನ್ನು ನೀಡಬೇಕು. ಇತರ ಜಿಲ್ಲೆಗೆ ಸರಬರಾಜು ಮಾಡುವಂತಿಲ್ಲ’ ಎಂದು ಹೇಳಿದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ಶ್ರೀಧರಮೂರ್ತಿ, ‘ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಕೊರತೆ ಇಲ್ಲ. ಡಿಎಪಿ, ಯೂರಿಯಾ ಸೇರಿ ಇತರ ರಸಗೊಬ್ಬರಗಳನ್ನು ರೈತರಿಗೆ ಸಕಾಲದಲ್ಲಿ ವಿತರಣೆ ಮಾಡಬೇಕು. ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಬಾರದು. ಲೋಪ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಕೃಷಿ ಇಲಾಖೆಯ ಜಾರಿ ದಳದ ಸಹಾಯಕ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಶಿವಮೂರ್ತಪ್ಪ, ತಾಲ್ಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಮಂಜಣ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-43-462052850

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.