ದಾವಣಗೆರೆ: ಮುಂದಿನ ದಿನಗಳಲ್ಲಿ ರಸಗೊಬ್ಬರ ಹಾಗೂ ಮುಂಗಾರು ಮಳೆ ಕೊರತೆಯಾದಲ್ಲಿ ಉಂಟಾಗಬಹುದಾದ ಸಮಸ್ಯೆಯ ತೀವ್ರತೆ ತಗ್ಗಿಸಲು ಕೃಷಿ ಇಲಾಖೆ ಮುಂದಾಗಿದೆ. ಇದಕ್ಕಾಗಿ ಕಡಿಮೆ ನೀರು ಹಾಗೂ ಅಲ್ಪ ರಸಗೊಬ್ಬರ ಬೇಡುವ ದ್ವಿದಳ ಧಾನ್ಯ ಹಾಗೂ ಎಣ್ಣೆಕಾಳುಗಳ ಬೆಳೆ ಬೆಳೆಯಲು ರೈತರನ್ನು ಪ್ರೋತ್ಸಾಹಿಸುತ್ತಿದೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೃಷಿಗೆ ರಸಗೊಬ್ಬರದ ಕೊರತೆ/ದರ ಏರಿಕೆಯ ಭೀತಿ ಶುರುವಾಗಿದೆ. ಈ ಬಾರಿ ಮುಂಗಾರು ಮಳೆಯೂ ಕಡಿಮೆಯಾಗುವ ಆತಂಕವನ್ನು ಹಮಾವಾನ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಈ ಕಾರಣಕ್ಕೆ ಜಿಲ್ಲೆಯ ಪ್ರಧಾನ ಬೆಳೆಯಾದ ಮೆಕ್ಕೆಜೋಳವನ್ನು ಕಡಿಮೆ ಬೆಳೆಯುವಂತೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮೆಕ್ಕೆಜೋಳ ಹೆಚ್ಚು ರಸಗೊಬ್ಬರ ಹಾಗೂ ಮಳೆ ಬೇಡುವ ಬೆಳೆಯಾಗಿದೆ. ಇದಕ್ಕೆ ಪರ್ಯಾಯವಾಗಿ ದ್ವಿದಳ ಧಾನ್ಯ ಬೆಳೆಯುವಂತೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.

ದ್ವಿದಳ ಧಾನ್ಯಗಳಾದ ಕಡಲೆ, ತೊಗರಿ, ಹೆಸರುಕಾಳು, ಉದ್ದಿನಬೇಳೆ, ಅವರೆಕಾಳು ಹಾಗೂ ಎಣ್ಣೆಕಾಳು ಬೆಳೆಗಳಾದ ಸೂರ್ಯಕಾಂತಿ, ಸೋಯಾಬೀನ್, ಶೇಂಗಾ ( ಕಡಲೆಕಾಯಿ) ಬೆಳೆಯುವಂತೆ ಪ್ರೋತ್ಸಾಹಿಸಲಾಗುತ್ತಿದೆ.

ತಗ್ಗಿದ ಮೆಕ್ಕೆಜೋಳ ಬೆಳೆ: 2026–27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 2,14,938 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಕಳೆದ ವರ್ಷ 1.96 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, ವಾಸ್ತವವಾಗಿ 2.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿತ್ತು.

ಕಳೆದ ವರ್ಷ ಅತಿ ಹೆಚ್ಚಿನ ಪ್ರದೇಶದಲ್ಲಿ (1.20 ಲಕ್ಷ ಹೆಕ್ಟೇರ್) ಮೆಕ್ಕೆಜೋಳ ಬೆಳೆಯುವ ಗುರಿ ಹೊಂದಲಾಗಿತ್ತು. ಆದರೆ, ಈ ಬಾರಿ 90 ಸಾವಿರ ಹೆಕ್ಟೇರ್ಗೆ ಇದನ್ನು ಸೀಮಿತಗೊಳಿಸಲು ಚಿಂತಿಸಲಾಗಿದೆ. ಕಳೆದ ವರ್ಷ 53 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಿದ್ದ ಭತ್ತದ ಬೆಳೆಯ ಗುರಿಯು ಈ ಬಾರಿ 63 ಸಾವಿರ ಹೆಕ್ಟೇರ್ಗೆ ಏರಿಕೆಯಾಗಿದೆ.

ಮುಂಗಾರು ಪೂರ್ವ; ಶೇ 13ರಷ್ಟು ಮಳೆ ಕೊರತೆ

ಜಿಲ್ಲೆಯಲ್ಲಿ ಮುಂಗಾರು ಪೂರ್ವ ಅವಧಿಯಲ್ಲಿ (ಮಾರ್ಚ್ನಿಂದ ಮೇ) ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಮುಂಗಾರು ಪೂರ್ವ ಅವಧಿಯಲ್ಲಿ ವಾಡಿಕೆಯಂತೆ 73.2 ಮಿ.ಮೀ. ಮಳೆ ಸುರಿಯಬೇಕಿತ್ತು. ವಾಸ್ತವದಲ್ಲಿ ಮೇ 18ರವರೆಗೂ 63.7 ಮಿ.ಮೀ. ಮಳೆ ಬಿದ್ದಿದೆ. 9.5 ಮಿ.ಮೀ. (ಶೇ 13ರಷ್ಟು) ಕೊರತೆ ಉಂಟಾಗಿದೆ. 3–4 ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದು ಆಶಾದಾಯಕವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಈ ವರ್ಷ ನೈರುತ್ಯ ಮುಂಗಾರು ಮಳೆ ಮೇ 26ರಂದು ಕೇರಳಂ ಪ್ರವೇಶಿಸಲಿದೆ. ಜೂನ್ ಮೊದಲ ವಾರ ರಾಜ್ಯಕ್ಕೆ ಲಗ್ಗೆ ಇಡುವ ನಿರೀಕ್ಷೆ ಹೊಂದಲಾಗಿದೆ. ನೀರಾವರಿ ಸೌಲಭ್ಯ ಹೊಂದಿರುವ ಪ್ರದೇಶಗಳಲ್ಲಿ ಇನ್ನೂ ಭತ್ತದ ಕಟಾವು ನಡೆಯುತ್ತಿದೆ. ಮಳೆಯಾಧಾರಿತ ಜಮೀನುಗಳನ್ನು ಈಗಾಗಲೇ ರೈತರು ಹದಗೊಳಿಸಿಕೊಳ್ಳುತ್ತಿದ್ದಾರೆ. ಜೂನ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರುವ ನಿರೀಕ್ಷೆ ಇದೆ. ‘ಮೇ 17ರಂದು ಸುರಿದ ಮಳೆಗೆ ಜಿಲ್ಲೆಯಲ್ಲಿ ಒಟ್ಟು 166 ಎಕರೆ ಬೆಳೆ ಹಾನಿ, 3 ಮನೆ ಹಾಗೂ 1 ದನದ ಕೊಟ್ಟಿಗೆಗೆ ಹಾನಿಯಾಗಿದೆ. ಒಟ್ಟು ₹ 25.70 ಲಕ್ಷ ನಷ್ಟ ಉಂಟಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.