ದಾವಣಗೆರೆ: ‘ವಿದ್ಯಾರ್ಥಿಗಳನ್ನು ಕರೆದೊಯ್ಯುವ ಆಟೊ ಚಾಲಕರು ಸುರಕ್ಷತೆಯ ದೃಷ್ಟಿಯಿಂದ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ಹೇಳಿದರು.

ನಗರದಲ್ಲಿ ಪೊಲೀಸ್ ಇಲಾಖೆ, ಡಾನ್ ಬೋಸ್ಕೊ ಸಂಸ್ಥೆ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ‘ಆಟೊ ಚಾಲಕರು ಮತ್ತು ಮಾಲೀಕರಿಗೆ ಸಂಚಾರ ನಿಯಮಗಳ ಅರಿವು ಹಾಗೂ ಮಕ್ಕಳ ಸುರಕ್ಷತೆ’ ಕುರಿತ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

‘ಜಿಲ್ಲೆಯಲ್ಲಿ 23 ಸಾವಿರ, ನಗರದಲ್ಲಿ 16 ಸಾವಿರ ಆಟೊಗಳಿವೆ. ಅವುಗಳನ್ನು ತಪ್ಪದೇ ನೋಂದಣಿ ಮಾಡಿಸಬೇಕು. ಮಕ್ಕಳು ಮತ್ತು ಮಹಿಳೆಯರು ವಾಹನಗಳಲ್ಲಿ ಇದ್ದಾಗ ಜಾಗರೂಕವಾಗಿರಬೇಕು’ ಎಂದರು.

‘ನಿಮ್ಮ ಸಂಘಟನೆಗಳಿಂದ ಗುರುತಿನ ಚೀಟಿ ಮಾಡಿಸಿಕೊಳ್ಳಿ. ಬೇರೆ ಜಿಲ್ಲೆಯ ಯಾವುದೇ ಆಟೊಗಳು ಓಡಾಡುತ್ತಿರುವುದು ಕಂಡುಬಂದರೆ ಕೂಡಲೇ ಸಂಚಾರ ಪೊಲೀಸರಿಗೆ ತಿಳಿಸಬೇಕು. ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ. ಆಟೊ ಚಾಲಕರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಎಎಸ್ಪಿ ಪರಮೇಶ್ವರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾನ್ ಬೋಸ್ಕೊ ಸಂಸ್ಥೆಯ ಸಿ.ಎಸ್.ಎನ್. ಯೋಜನೆಯ ಸಂಯೋಜಕ ಬಿ. ಮಂಜಪ್ಪ ಉಪನ್ಯಾಸ ನೀಡಿದರು.

ಸಮಾಜಮುಖಿ ಕಾರ್ಯ ಮತ್ತು ಮಾನವೀಯತೆ ಮೆರೆದಿದ್ದ 7 ಜನ ಆಟೊ ಚಾಲಕರನ್ನು ಸನ್ಮಾನಿಸಲಾಯಿತು.

ಡಿವೈಎಸ್ಪಿಗಳಾದ ಬಸವರಾಜ್, ಶರಣಬಸವೇಶ್ವರ, ಸಂಸ್ಥೆಯ ನಿರ್ದೇಶಕ ಫಾದರ್ ರೆಜಿ ಜೇಕಬ್ ಡಾನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-43-917818455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.