ದಾವಣಗೆರೆ/ಬಾಗಲಕೋಟೆ: ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಸೋಮವಾರ ಒಂದೇ ದಿನ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 30, ಬಾಗಲಕೋಟೆ ಕ್ಷೇತ್ರದಲ್ಲಿ 13 ಮಂದಿ ನಾಮಪತ್ರ ಸಲ್ಲಿಸಿದರು.

ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಆಯಾ ಪಕ್ಷದ ಮುಖಂಡರ ಜೊತೆಗೂಡಿ ಬಂದು ನಾಮಪತ್ರ ಸಲ್ಲಿಸಿದ್ದು, ಇದರೊಂದಿಗೆ ಉಭಯ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯವು ಚುರುಕುಗೊಂಡಿತು.

ಅಂತಿಮವಾಗಿ ಒಟ್ಟಾರೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 39 ಅಭ್ಯರ್ಥಿಗಳಿಂದ 45 ನಾಮಪತ್ರಗಳು, ಬಾಗಲಕೋಟೆ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳಿಂದ 26 ನಾಮಪತ್ರಗಳು ಸಲ್ಲಿಕೆಯಾಗಿವೆ.

ನಾಮಪತ್ರಗಳ ಪರಿಶೀಲನೆ ಕಾರ್ಯ ಮಾರ್ಚ್ 24ರಂದು ನಡೆಯಲಿದ್ದು, ನಾಮಪತ್ರ ವಾಪಸು ಪಡೆಯಲು ಮಾರ್ಚ್ 26 ಕಡೆಯ ದಿನವಾಗಿದೆ.

ದಾವಣಗೆರೆ ವರದಿ: ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಕ್ಷಿಣ ಕ್ಷೇತ್ರದಲ್ಲಿ ಸೋಮವಾರ ಕಾಂಗ್ರೆಸ್, ಬಿಜೆಪಿ, ಎಎಪಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸೇರಿದಂತೆ 30 ಅಭ್ಯರ್ಥಿಗಳಿಂದ 35 ಉಮೇದುವಾರಿಕೆಗಳು ಸಲ್ಲಿಕೆ ಯಾಗಿವೆ. ಮಾರ್ಚ್ 20ರಂದು 9 ಹಾಗೂ ಮಾರ್ಚ್ 18ರಂದು 1 ನಾಮಪತ್ರ ಸಲ್ಲಿಕೆಯಾಗಿದ್ದವು.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ವೇಳೆ ಆಯಾ ಪಕ್ಷಗಳ ಶಕ್ತಿ ಪ್ರದರ್ಶನ ನಡೆಯಿತು. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ನಗರದೇವತೆ ದುರ್ಗಾಂಬಿಕಾ ದೇಗುಲದಿಂದ ಅದ್ದೂರಿ ಮೆರವಣಿಗೆ ನಡೆಸಿದರು. ಆಯಾ ಪಕ್ಷಗಳ ಸಾವಿರಾರು ಕಾರ್ಯಕರ್ತರು ಪಕ್ಷದ ಬಾವುಟಗಳನ್ನು ಹಿಡಿದು ಮೆರವಣಿಗೆ
ಯಲ್ಲಿ ಹೆಜ್ಜೆ ಹಾಕಿದರು.

ಸಮರ್ಥ್ ಶಾಮನೂರು ಉಮೇದು ವಾರಿಕೆ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಮಾಜಿ ಸಚಿವ ಎಚ್.ಆಂಜನೇಯ ಹಾಜರಿದ್ದರು. ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಜೊತೆಗಿದ್ದರು.

ಬಾಗಲಕೋಟೆ ವರದಿ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಕಣದಲ್ಲಿ 16 ಅಭ್ಯರ್ಥಿಗಳಿದ್ದು, 26 ನಾಮಪತ್ರಗಳು ಸಲ್ಲಿಕೆಯಾಗಿವೆ. ಸೋಮವಾರ 13 ಅಭ್ಯರ್ಥಿಗಳಿಂದ 19 ನಾಮಪತ್ರ ಸಲ್ಲಿಕೆಯಾದವು.

‘ಬಿಜೆಪಿಯಿಂದ ವೀರಣ್ಣ ಚರಂತಿಮಠ ಮೂರು ಸೆಟ್ ಮತ್ತು ಕಾಂಗ್ರೆಸ್ನಿಂದ ಉಮೇಶ ಮೇಟಿ ನಾಲ್ಕು ಸೆಟ್ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.

ಕಾಂಗ್ರೆಸ್ನಿಂದ ಗೋವಿಂದರಾಜ ಬಳ್ಳಾರಿ, ಕರ್ನಾಟಕ ರಾಷ್ಟ್ರ ಸಮಿತಿಯಿಂದ ನಾಗರಾಜ ಕಲಕುಟಗರ, ಜನತಾ ಚಳುವಳಿ ಭಾರತ ಪಕ್ಷದಿಂದ ತೇಜೋರಾಮ ಶೆಟ್ಟಿ, ಆಲ್ ಇಂಡಿಯಾ ಜನರಕ್ಷಾ ಪಾರ್ಟಿಯಿಂದ ಸಿದ್ದಪ್ಪ ಗೋಡಿ, ಪಕ್ಷೇತರರಾಗಿ ಶಿವಪ್ಪ ಪಡಸಲಗಿ, ಯಂಕಪ್ಪ ಕಮತಗಿ, ಅಬ್ದುಲ್ ರಜಾಕ್ ಬಾಳಿಕಾಯಿ, ಆಯುಬ್ಖಾನ್ ಲಾಲಸಾಬ್ ಬಾಗೇವಾಡಿ, ಪರಶುರಾಮ ನೀಲನಾಯಕ, ಬಾಬುಷಾ ರೊಳ್ಳಿ, ಪ್ರಶಾಂತ ರಾವ್ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.