ಸಾಸ್ವೆಹಳ್ಳಿ: ಈ ಭಾಗದ ಭಾವೈಕ್ಯತೆ ಮತ್ತು ಸೌಹಾರ್ದತೆ ಪರಂಪರೆ ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು’ ಎಂದು ಹೊನ್ನಾಳಿ ಪಿಎಸ್ಐ ನಿರ್ಮಲ ಸೂಚಿಸಿದರು.

ಇಲ್ಲಿನ ಪೊಲೀಸ್ ಹೊರ ಠಾಣಾ ಆವರಣದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.

‘ಹಬ್ಬಗಳಲ್ಲಿ ಸಮಾಜದ ಎಲ್ಲ ವರ್ಗದ ಜನರೂ ಮುಕ್ತವಾಗಿ ತೊಡಗಿಸಿಕೊಂಡಾಗ ಪರಸ್ಪರ ಸಹಬಾಳ್ವೆ, ಪ್ರೀತಿ ಹೆಚ್ಚಾಗಲು ಸಾಧ್ಯ. ಗ್ರಾಮೀಣ ಭಾಗಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಮುಖಂಡರ ಪಾತ್ರ ಪ್ರಮುಖವಾದುದು. ಹಬ್ಬದ ವೇಳೆ ಯುವ ಪೀಳಿಗೆಯು ಹಾದಿ ತಪ್ಪದಂತೆ, ಅನುಚಿತವಾಗಿ ವರ್ತಿಸದಂತೆ ಹಾಗೂ ಗಲಾಟೆಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಬೇಕು. ತಮ್ಮ ಕುಟುಂಬ ಹಾಗೂ ಸಮಾಜದ ಯುವಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಹೇಳಿದರು.

ಪೊಲೀಸ್ ಸಿಬ್ಬಂದಿ ದೇವರಾಜ್, ಸಿದ್ದಪ್ಪ, ಮಂಜುನಾಥ್ ಹಾಗೂ ಗ್ರಾಮದ ಪ್ರಮುಖ ಮುಖಂಡರಾದ ಸುಲೇಮಾನ್ ಸಾಬ್, ರೇಣುಕಾ, ನರಸಿಂಹ, ಅಬು ಸಾಲಿಯಾ ಹಾಗೂ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-682011929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.