ದಾವಣಗೆರೆ: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಬಂದ್ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಮಾರುಕಟ್ಟೆ, ಮುಖ್ಯ ರಸ್ತೆ ಹಾಗೂ ಪ್ರಮುಖ ಬೀದಿಗಳಲ್ಲಿ ಮಧ್ಯಾಹ್ನದವರೆಗೆ ಅಂಗಡಿಗಳು ಬಾಗಿಲು ಮುಚ್ಚಿದ್ದವು.

ಬೆಳಿಗ್ಗೆ ಮಾದಿಗ ಸಂಘಟನೆಗಳ ಒಕ್ಕೂಟದ ಸದಸ್ಯರು ಟೈರ್ಗಳಿಗೆ ಬೆಂಕಿ ಹಚ್ಚಿ ವಾಹನ ಸಂಚಾರ ತಡೆದರು. ನೇಮಕಾತಿ ಪ್ರಕ್ರಿಯೆಯಲ್ಲಿ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸಾರಿಗೆ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಇದರಿಂದ ಆಕ್ರೋಶಗೊಂಡ ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಮುಂದಾದ. ಸ್ಥಳದಲ್ಲಿದ್ದ ಪೊಲೀಸರು ಇದನ್ನು ತಡೆದರು. ದ್ವಿಚಕ್ರ ವಾಹನ ಸವಾರರ ಮೇಲೆ ಪ್ರತಿಭಟನಕಾರರು ಹಲ್ಲೆ ನಡೆಸಿದ್ದರಿಂದ ಗಲಾಟೆ ಉಂಟಾಯಿತು.

ಕಡೂರು: ಮಹದೇವಪ್ಪ ವಿರುದ್ಧ ಬೇಸರ

ಕಡೂರು (ಚಿಕ್ಕಮಗಳೂರು): ಒಳ ಮೀಸಲಾತಿ ಜಾರಿ ಮಾಡದೆ ಹುದ್ದೆಗಳ ಭರ್ತಿ ನಿಲ್ಲಿಸಬೇಕು ಎಂದು ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನೂರಾರು ಜನ ರಸ್ತೆ ತಡೆದು ಪ್ರತಿಭಟಿಸಿದರು.

ಕಡೂರು, ಅಜ್ಜಂಪುರ, ತರೀಕೆರೆ, ಚಿಕ್ಕಮಗಳೂರಿನಿಂದ ಬಂದಿದ್ದ ನೂರಾರು ಜನ ಪ್ರವಾಸಿ ಮಂದಿರದಲ್ಲಿ ಜಮಾಯಿಸಿದ್ದರು. ಅಲ್ಲಿಂದ ಹೊರಟು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿದರು.

ಮುಖಂಡರಾದ ಶೂದ್ರ ಶ್ರೀನಿವಾಸ್, ಶಿವಪ್ರಸಾದ್,ಮಹೇಂದ್ರ ಸ್ವಾಮಿ, ಬಿ.ಟಿ. ಚಂದ್ರಶೇಖರ್, ಜಗದೀಶ್, ಮಲ್ಲಿಕಾರ್ಜನ್ ಇದ್ದರು.

ಧಾರವಾಡ, ಗದಗದಲ್ಲೂ ಆಕ್ರೋಶ

ಧಾರವಾಡ: ‘ಒಳಮೀಸಲಾತಿಗೆ ಸಂಬಂಧಿಸಿದಂತೆ ಫೆ. 27ರ ಡಿಪಿಎಆರ್ ಆದೇಶ ಹಿಂಪಡೆದು ಪರಿಷ್ಕೃತ ರೋಸ್ಟರ್ ಬಿಂದು ಗುರುತಿಸಿ 56 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು’ ಎಂದು ಒತ್ತಾಯಿಸಿ ರಾಷ್ಟ್ರೀಯ ಮಾದಿಗ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟಿಸಿದರು.

ರಾಷ್ಟ್ರೀಯ ಹೆದ್ದಾರಿಯ ನರೇಂದ್ರ ಗ್ರಾಮದ ಬಳಿ ನಡೆದ ಪ್ರತಿಭಟನೆ ವೇಳೆ, ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ್, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

ಮನವಿ ಸ್ವೀಕರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಸ್ಥಳಕ್ಕೆ ಬಂದಾಗ, ‘ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು, ಮನವಿಪತ್ರ ಸ್ವೀಕರಿಸಬೇಕು’ ಎಂದು ಪಟ್ಟು ಹಿಡಿದರು. ಪೊಲೀಸರು 30ಕ್ಕೂ ಹೆಚ್ಚು ಪ್ರತಿಭಟನಕಾರರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು. ಗದಗ ಜಿಲ್ಲೆಯ ನರಗುಂದ, ಲಕ್ಷ್ಮೇಶ್ವರದಲ್ಲೂ ಮಾದಿಗ ಸಂಘಟನೆ ಪ್ರಮುಖರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.