ದಾವಣಗೆರೆ: ಮೂಲಸೌಲಭ್ಯ ಕೊರತೆ ಇದೆ ಎಂದು ಆರೋಪಿಸಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತ್ ಕಾಲೊನಿ ನಿವಾಸಿಗಳು ಉಪಚುನಾವಣೆಯ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈ ಕುರಿತು 20ನೇ ವಾರ್ಡ್ ವ್ಯಾಪ್ತಿಯ 1ನೇ ಕ್ರಾಸ್ನಲ್ಲಿ ಬ್ಯಾನರ್ ಅಳವಡಿಸಿದ್ದಾರೆ.

‘ನಾಲ್ಕು ದಶಕಗಳಿಂದ ವಾಸವಾಗಿದ್ದರೂ ಮೂಲಸೌಲಭ್ಯಗಳನ್ನು ಕಲ್ಪಿಸಿಲ್ಲ. ಮನೆಗಳಿಗೆ ಹಕ್ಕುಪತ್ರ ಹೊಂದಿದ್ದರೂ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ರಸ್ತೆ, ಚರಂಡಿ, ಕುಡಿಯುವ ನೀರು ಕೂಡ ಸಮರ್ಪಕವಾಗಿಲ್ಲ’ ಎಂದು ಕಾಲೊನಿ ನಿವಾಸಿಗಳು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಖರಾಬು ಜಾಗದಲ್ಲಿ 40 ವರ್ಷಗಳಿಂದ ವಾಸಿಸುತ್ತಿದ್ದೇವೆ. 25 ಕುಟುಂಬಗಳಿಂದ 100ಕ್ಕೂ ಹೆಚ್ಚು ಜನರಿದ್ದೇವೆ. ಪ್ರತಿ ವರ್ಷವೂ ಮತದಾನ ಮಾಡಿದ್ದೇವೆ. ಆದರೆ, ಮೂಲಸೌಲಭ್ಯ ಮಾತ್ರ ಸಿಕ್ಕಿಲ್ಲ. ಕುಡಿಯುವ ನೀರು ಪೂರೈಸುವಂತೆ ಮಹಾನಗರ ಪಾಲಿಕೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ಶಂಕರ್ ಅಸಮಾಧಾನ ಹೊರಹಾಕಿದರು.

‘ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುತ್ತಿದೆ. ಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಸಾವಿತ್ರಮ್ಮ ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.