ದಾವಣಗೆರೆ: ‘ರಾಜ್ಯದಲ್ಲಿ 2028ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಮಾತ್ರವೇ ಸಮಯ ಇದೆ. ಬಿಜೆಪಿ ಕಾರ್ಯಕರ್ತರು ಇಂದಿನಿಂದಲೇ ಮನೆ ಮನೆಗೆ ಭೇಟಿ ನೀಡಿ ಮತದಾರರ ಮನವೊಲಿಸುವ ಕಾರ್ಯಕ್ಕೆ ಮುಂದಾಗಬೇಕು. ಪಕ್ಷವನ್ನು ಅಧಿಕಾರಕ್ಕೆ ತರಲು ಕಟಿಬದ್ಧರಾಗಿ ಶ್ರಮಿಸಬೇಕು’ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಹೇಳಿದರು.

ಇಲ್ಲಿನ ವಿನೋಬ ನಗರದ ದಾವಣಗೆರೆ- ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಶನಿವಾರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಡಲದಿಂದ ಆಯೋಜಿಸಿದ್ದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ವರ್ಗ ಮಹಾಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಸಾಕಷ್ಟು ನಿರೀಕ್ಷೆ ಇತ್ತು. ಎದುರಾಳಿ ಪಕ್ಷದವರು ಹಣದ ಹೊಳೆ ಹರಿಸಿದ್ದೂ ಸೇರಿದಂತೆ ನಾನಾ ಕಾರಣಗಳಿಂದಾಗಿ ನಾವು ಸೋತಿದ್ದೇವೆ. ಆದರೆ, ಇದರಿಂದ ಕುಗ್ಗುವುದು ಬೇಡ, ಪಕ್ಷದ ಬಲವರ್ಧನೆಗೆ ಶ್ರಮಿಸೋಣ. 2028ರ ಚುನಾವಣೆಯಲ್ಲಿ ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಪಕ್ಷ ಸಂಘಟನೆಯೊಂದಿಗೆ ಹಿಂದೂ ಧರ್ಮ, ಭಾರತೀಯ ಸಂಸ್ಕಾರವನ್ನು ಉಳಿಸಲೂ ಶ್ರಮಿಸೋಣ. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನರಿಗೆ ಬಿಜೆಪಿ ಸರ್ಕಾರದ ಸಾಧನೆ, ಯೋಜನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸೋಣ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಶಿಕ್ಷಣ ವರ್ಗ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ’ ಎಂದು ಹೇಳಿದರು.

‘ಪ್ರಶಿಕ್ಷಣ ವರ್ಗ ನಮ್ಮ ಜಿಲ್ಲೆಯಲ್ಲಿ ಮುಂಚೆಯೇ ಆಗಬೇಕಿತ್ತು. ಆದರೆ, ಉಪ ಚುನಾವಣೆಯ ಕಾರಣಕ್ಕೆ ತಡವಾಗಿದೆ. ಎಲ್ಲಾ ತಾಲ್ಲೂಕುಗಳಲ್ಲೂ ಪ್ರಶಿಕ್ಷಣ ವರ್ಗ ಮಾಡಿ, ಚುನಾವಣೆಗೆ ಸನ್ನದ್ಧರಾಗೋಣ’ ಎಂದರು.

‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ. ಆದರೂ, ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ. ಬಿಜೆಪಿ ಎಂದೂ ಅಧಿಕಾರಕ್ಕಾಗಿ ಹಪಹಪಿಸಿಲ್ಲ ಎಂಬುದಕ್ಕೆ ಇದು ಸಾಕ್ಷಿಯಾಗಿದೆ’ ಎಂದು ಪ್ರಾಸ್ತಾವಿಕ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತ್ರಾವ್ ಜಾಧವ್ ಅಭಿಪ್ರಾಯಪಟ್ಟರು.

‘ಬಿಜೆಪಿಯ ಸಾಕಷ್ಟು ನಾಯಕರು ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ತ್ಯಾಗ, ಬಲಿದಾನದ ಮೂಲಕ ಪಕ್ಷ ಸಂಘಟನೆ ಮಾಡಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬುದನ್ನು ಬಿಜೆಪಿ ಪಾಲಿಸಿಕೊಂಡು ಬಂದಿದೆ’ ಎಂದು ಹೇಳಿದರು.

‘ದಾವಣಗೆರೆ ದಕ್ಷಿಣ ಕ್ಷೇತ್ರದ ಕಾರ್ಯಕರ್ತರು ಹೋರಾಟದ ಮುಂಚೂಣಿಯಲ್ಲಿ ನಿಲ್ಲುತ್ತಿರುವುದು ಹೆಮ್ಮೆಯ ವಿಚಾರ’ ಎಂದರು.

ಮಂಡಲ ಅಧ್ಯಕ್ಷ ವಿಜಯಕುಮಾರ ಅಧ್ಯಕ್ಷತೆ ವಹಿಸಿದ್ದರು. ‘ಧೂಡಾ’ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೊಗ್ಗಳ್ಳಿ ವೀರೇಶ, ಶ್ರೀನಿವಾಸ ದಾಸಕರಿಯಪ್ಪ, ಬಿ.ಜಿ.ಅಜಯ್ಕುಮಾರ್, ಎಂ.ಪಿ.ಕೃಷ್ಣಮೂರ್ತಿ ಪವಾರ್, ಎಸ್.ಟಿ.ವೀರೇಶ್, ಬಿ.ಎಂ.ಸತೀಶ್ ಕೊಳೇನಹಳ್ಳಿ, ಚೇತನಾ ಶಿವಕುಮಾರ, ಶಿವಕುಮಾರ್, ರುದ್ರೇಗೌಡ, ನವೀನಕುಮಾರ, ಶಿವನಗೌಡ ಪಾಟೀಲ ಹಾಗೂ ಇನ್ನಿತರ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-43-1141283446

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.