ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಸೇತುವೆ ಮುಳುಗಡೆ: ನೀರಿನಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಗಂಗನಕೋಟೆ ಗ್ರಾಮದಲ್ಲಿ ಮಳೆಯಿಂದ ಸೇತುವೆ ಮುಳುಗಡೆಯಾಗಿದ್ದು, ಕಾರಿನಲ್ಲಿ ಬರುತ್ತಿದ್ದಾಗ ನೀರಿನಲ್ಲಿ ಸಿಲುಕಿದ ವ್ಯಕ್ತಿಯೊಬ್ಬರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

ಸವಳಂಗ ಕೆರೆ ಭರ್ತಿಯಾಗಿದ್ದು  ಗಂಗನಕೋಟೆ-ಹೊನ್ನಾಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ಇರುವ  ಸೇತುವೆಯ ಮೇಲೆ ಹರಿದಿದೆ. ಆ ವೇಳೆ ಕಾರಿನಲ್ಲಿ ಬರುತ್ತಿದ್ದ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರು ನೀರಿನಲ್ಲಿ ಸಿಲುಕಿದ್ದಾರೆ.  ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ ರಸ್ತೆ ದಾಟಲು ಆಗದೆ ಅರ್ಧಗಂಟೆಗೂ ಹೆಚ್ಚು ಕಾಲ ಪರದಾಡಿದರು. ಸ್ಥಳಕ್ಕೆ ಬಂದ ಗ್ರಾಮಸ್ಥರು ಹಗ್ಗ ಹಾಕಿ ಅವರನ್ನು ರಕ್ಷಿಸಿದರು.

ಮಳೆಯಿಂದಾಗಿ ಹರಿಹರ ಪಟ್ಟಣದ ಗಂಗಾನಗರದಲ್ಲಿ 16ಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿದ್ದು, 67 ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನ ಕೆಲವು ಗ್ರಾಮಗಳು ಮುಳುಗಡೆಯ ಭೀತಿಯಲ್ಲಿದ್ದು, ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು