ದಾವಣಗೆರೆ: ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಚನ್ನಗಿರಿ ತಾಲ್ಲೂಕಿನ ಕೋಟೆಹಾಳು- ಮರಬನಹಳ್ಳಿ ಜಿಲ್ಲಾ ಮುಖ್ಯರಸ್ತೆಯಲ್ಲಿ ಶುಕ್ರವಾರ ನಡೆದ ಕೆಎಸ್ಆರ್ಟಿಸಿ ಬಸ್ ಪಲ್ಟಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಶಾಸಕ ಕೆ.ಎಸ್.ಬಸವಂತಪ್ಪ ವಿಚಾರಿಸಿದರು.

ಶನಿವಾರ ಜಿಲ್ಲಾ ಚಿಗಟೇರಿ ಆಸ್ಪತ್ರೆ ಮತ್ತು ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿದ ಕೆ.ಎಸ್.ಬಸವಂತಪ್ಪ ಅವರು ಗಾಯಾಳುಗಳಿಗೆ ಧೈರ್ಯ ತುಂಬಿದರು.

ಗಾಯಗೊಂಡ ನಾಲ್ವರ ಕೈ ಕಾಲುಗಳು ಮುರಿದಿದ್ದು, ಸೋಮವಾರ ಶಸ್ತ್ರಚಿಕಿತ್ಸೆ ನಡೆಯಲಿದೆ. ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಚರ್ಚಿಸಿ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಹೈಟೆಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ನಾಲ್ವರ ಪೈಕಿ ಮೂವರು ಗಾಯಾಳುಗಳು ಬಿಡುಗಡೆಯಾಗಿದ್ದಾರೆ. ಒಂದು ಮಗು ಚಿಕಿತ್ಸೆ ಪಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.