ಬಸವಾಪಟ್ಟಣ: ಸಮೀಪದ ಕೋಟೆಹಾಳು–ಮರಬನಹಳ್ಳಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 9.30ಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ (ಕೆಎಸ್ಆರ್ಟಿಸಿ) ಪಲ್ಟಿಯಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ದಾವಣಗೆರೆಯಿಂದ ಹೊನ್ನಾಳಿಗೆ ತೆರಳುತ್ತಿದ್ದ ಬಸ್ನ ಆ್ಯಕ್ಸಲ್ ತುಂಡಾಗಿದ್ದರಿಂದ ಅವಘಡ ಸಂಭವಿಸಿದ್ದು, ಬಸ್ನಲ್ಲಿದ್ದ 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ದರ್ಶನ್ (19) ಮೃತ ವಿದ್ಯಾರ್ಥಿ.

ಬಸ್ನಲ್ಲಿ 80ಕ್ಕೂ ಹೆಚ್ಚು ಜನ ಸಂಚರಿ ಸುತ್ತಿದ್ದರು. ಮಹಿಳೆಯರು, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಾಗಿಲಿನ ಕಡೆಗೆ ಬಸ್ ಮಗುಚಿಕೊಂಡಿದ್ದರಿಂದ ಗಾಬರಿಗೊಂಡ ಪ್ರಯಾಣಿಕರು ಜೀವ ಉಳಿಸಿಕೊಳ್ಳುವ ಭರದಲ್ಲಿ ಒಬ್ಬರ ಮೇಲೊಬ್ಬರು ಬಿದ್ದು, ಕಿಟಕಿಗಳ ಮೂಲಕ ಪಾರಾಗಲು ಯತ್ನಿಸಿದ್ದಾರೆ.

ಬಸವಾಪಟ್ಟಣ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಬಸವಾಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಸೇರಿಸಲು ನೆರವಾದರು. ಸ್ಥಳೀಯ ಯುವಕರು ಸಹಾಯ ಮಾಡಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ಎರಡು ಆಂಬುಲೆನ್ಸ್ಗಳ ಜತೆ ಕೂಲಂಬಿ, ತ್ಯಾವಣಿಗೆ ಮತ್ತು ಸಾಸ್ವೆಹಳ್ಳಿಯಿಂದ ತರಿಸಿಕೊಂಡ ‘108’ ಆಂಬುಲೆನ್ಸ್ಗಳಲ್ಲಿ 30 ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಕಳಿಸಲಾಯಿತು. ಈ ಪೈಕಿ ಹತ್ತು ಜನ ತೀವ್ರವಾಗಿ ಗಾಯಗೊಂಡಿದ್ದು, ಮಹಿಳೆಯೊಬ್ಬರ ತಲೆ ಮತ್ತು ಕಣ್ಣಿನ ಭಾಗಕ್ಕೆ ತೀವ್ರ ಪೆಟ್ಟಾಗಿದೆ. ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಳಿದ 40 ಜನ ಗಾಯಾಳುಗಳಿಗೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳಿಸಲಾಯಿತು ಎಂದು ವೈದ್ಯಾಧಿಕಾರಿ ಹೇಮಂತಕುಮಾರ್ ಹಾಗೂ ವೈದ್ಯ ಪ್ರಸನ್ನ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-44-855801543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.