ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್, ಬಿಜೆಪಿಯ ಮುಖಂಡರ ದಂಡು ಆಗಮಿಸಿದ್ದು, ಮತದಾರರ ಸೆಳೆಯಲು ಕಸರತ್ತು ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಚಿವರು, ಶಾಸಕರು ಪಕ್ಷದ ಅಭ್ಯರ್ಥಿ ಪರವಾಗಿ ಅಖಾಡಕ್ಕೆ ಇಳಿದಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ ಸಾರಥ್ಯದಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶಾಸಕರು, ಮಾಜಿ ಸಚಿವರು ಬೆವರು ಸುರಿಸುತ್ತಿದ್ದಾರೆ.

ಬೂತ್ ತೊರೆಯದಂತೆ ತಾಕೀತು: ಗೆಲುವಿಗೆ ಕಾರ್ಯತಂತ್ರ ರೂಪಿಸಲು ಡಿ.ಕೆ. ಶಿವಕುಮಾರ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸರಣಿ ಸಭೆ ನಡೆಸಿದರು. ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ತೆರೆದಿರುವ ಕೆಪಿಸಿಸಿ ಕ್ಯಾಂಪ್ ಕಚೇರಿ ಇಡೀ ದಿನ ಚಟುವಟಿಕೆಯಿಂದ ಕೂಡಿತ್ತು.

ಪ್ರಚಾರಕ್ಕೆ ಪಕ್ಷ ನಿಯೋಜಿಸಿದ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಇಬ್ಬರೂ ಸಭೆ ನಡೆಸಿದರು. ಕೆಪಿಸಿಸಿ ವೀಕ್ಷಕರು, ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳು, ಜಿಲ್ಲಾ ಮುಖಂಡರೊಂದಿಗೆ ಚರ್ಚಿಸಿದರು. ಏ.7ರವರೆಗೆ ಜವಾಬ್ದಾರಿ ನೀಡಿದ ಬೂತ್ಗಳನ್ನು ತೊರೆಯದಂತೆ ತಾಕೀತು ಮಾಡಿದರು.

ಕ್ಷೇತ್ರ ವ್ಯಾಪ್ತಿಯ 284 ಮತಗಟ್ಟೆಗಳನ್ನು ವಿಂಗಡಿಸಿ ಸಚಿವರು, ಶಾಸಕರು ಹಾಗೂ ನಿಗಮ– ಮಂಡಳಿಗಳ ಅಧ್ಯಕ್ಷರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಬಿಜೆಪಿ ಪ್ರಣಾಳಿಕೆ ಬಿಡುಗಡೆ: ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪ್ರಣಾಳಿಕೆಯನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಬಿಡುಗಡೆ ಮಾಡಿದರು. 12 ಪ್ರಮುಖ ಅಂಶಗಳ ಪ್ರಣಾಳಿಕೆಯಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.

ಬಿ.ಎಸ್.ಯಡಿಯೂರಪ್ಪ, ಸಂಸದ ಬಸವರಾಜ ಬೊಮ್ಮಾಯಿ ಅವರೂ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು. ಶಾಸಕ ಸುನಿಲ್ಕುಮಾರ್ ಅವರು ಕಾರ್ಯಕರ್ತರ ಸಭೆ ನಡೆಸಿ ಕಾರ್ಯತಂತ್ರ ರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-51-1344104530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.