ದಾವಣಗೆರೆ: ‘ನಗರಕ್ಕೆ ಮೂಲಸೌಕರ್ಯ ಕಲ್ಪಿಸಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಶಾಮನೂರು ಶಿವಶಂಕರಪ್ಪ ಅವರ ಋಣವನ್ನು ಉಪಚುನಾವಣೆಯಲ್ಲಿ ಮತದಾರರು ತೀರಿಸುವ ವಿಶ್ವಾಸವಿದೆ’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರೂ ಆಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಇಲ್ಲಿನ ಅಭಿನವ ರೇಣುಕ ಮಂದಿರದಲ್ಲಿ ಸೋಮವಾರ ನಡೆದ ವೀರಶೈವ ಲಿಂಗಾಯತ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು.

‘ಕಳಾಹೀನವಾಗಿದ್ದ ಜಿಲ್ಲೆಯ ಔದ್ಯೋಗಿಕ, ಶೈಕ್ಷಣಿಕ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿನ ಸಾಧನೆಗೆ ಶಿವಶಂಕರಪ್ಪ ಅವರೇ ಕಾರಣ. ಸರ್ವರಿಗೂ ಸಾಮಾಜಿಕ ನ್ಯಾಯ ನೀಡಿದ್ದು ವೀರಶೈವ ಲಿಂಗಾಯತ ಸಮುದಾಯ. ಸಮುದಾಯವೇ ನ್ಯಾಯ ಕೇಳುವ ಸ್ಥಿತಿ ನಿರ್ಮಾಣವಾದಾಗ ಗಟ್ಟಿಯಾಗಿ ನಿಂತವರು ಶಾಮನೂರು ಶಿವಶಂಕರಪ್ಪ. ಅವರ ಋಣ ಸಂದಾಯಕ್ಕೆ ಇದು ಸಕಾಲ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಿ.ಜಿ.ಶಾಂತನಗೌಡ, ತಮ್ಮಣ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-43-879486708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.