ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಜತೆಗೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಪಕ್ಷದ ವಿರುದ್ಧದ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಎಚ್ಚರಿಕೆ ನೀಡಿದ್ದಾರೆ.

‘ಬಿಜೆಪಿ ಮತ್ತು ಫ್ಯಾಸಿಸ್ಟ್ ಶಕ್ತಿಗಳೊಂದಿಗೆ ರಾಜಿ ಇಲ್ಲದೆ ಹೋರಾಟ ಮಾಡುವ ರಾಜಕೀಯ ಪಕ್ಷ ಎಂಬುದಾಗಿ ಎಸ್ಡಿಪಿಐ ಗುರುತಿಸಿಕೊಂಡಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್, ಇಂತಹ ಆರೋಪ ಮಾಡಲು ಯಾವ ನೈತಿಕತೆ ಉಳಿಸಿಕೊಂಡಿದೆ’ ಎಂದು ಪ್ರಶ್ನಿಸಿದ್ದಾರೆ.

‘ಸಂವಿಧಾನ, ಸಾಮಾಜಿಕ ನ್ಯಾಯ ಮತ್ತು ಅಹಿಂದ ವರ್ಗಗಳ ಹಕ್ಕುಗಳಿಗಾಗಿ ಪಕ್ಷ ಹೋರಾಟ ಮಾಡುತ್ತಿದೆ. ರಾಜಕಾರಣವನ್ನು ಹಣದಿಂದ ಅಳೆಯುವ ಮನೋಭಾವವೇ ಪ್ರಜಾಪ್ರಭುತ್ವಕ್ಕೆ ಅಪಾಯ. ಹಣಬಲ ಇಲ್ಲದಿದ್ದರೂ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಉಪಚುನಾವಣೆಯಲ್ಲಿ ಸಿಕ್ಕಿರುವ 19,000 ಮತಗಳು ಸ್ವಾಭಿಮಾನಕ್ಕೆ ದಕ್ಕಿದ ಯಶಸ್ಸು. ಪ್ರಮುಖ ಪಕ್ಷಗಳ ವಿರುದ್ಧ ಜನರ ಅಸಮಾಧಾನವನ್ನು ಇದು ತೋರಿಸಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-43-1244920894

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.