ದಾವಣಗೆರೆ: ಉಪಚುನಾವಣೆಯ ದಕ್ಷಿಣ ಕ್ಷೇತ್ರ ಗೆಲ್ಲಲು ಪಣತೊಟ್ಟಿರುವ ಬಿಜೆಪಿ ನಾಯಕರು ಪ್ರಚಾರ ಮಾತ್ರವಲ್ಲದೇ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾನುವಾರ ಇಡೀ ದಿನ ಬೂತ್ ಸಮಿತಿ ಸದಸ್ಯರೊಂದಿಗೆ ಸರಣಿ ಸಭೆಗಳನ್ನು ನಡೆಸಿದರು.

ನಗರ ಹಾಗೂ ಗ್ರಾಮೀಣ ವ್ಯಾಪ್ತಿಯ ಬೂತ್ ಸಮಿತಿ ಅಧ್ಯಕ್ಷರು, ಸದಸ್ಯರ ಜೊತೆ ಚರ್ಚಿಸಿದ ಅವರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು. ಮತದಾನದ ದಿನದವರೆಗೂ ಮತದಾರರ ಮನವೊಲಿಸಿ ಎಂದು ಸೂಚಿಸಿದರು.

ಸಭೆ ಬಳಿಕ ಮಾತನಾಡಿದ ಅವರು, ‘ದಕ್ಷಿಣ ಕ್ಷೇತ್ರದ ಪ್ರತಿ ಬೂತ್ನಲ್ಲಿ ಪರಿಸ್ಥಿತಿ ಬಗ್ಗೆ ಅವಲೋಕಿಸಿದ್ದೇನೆ. ಬೂತ್ ಪ್ರಮುಖರು ತುಂಬಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂಕಿ ಸಂಖ್ಯೆ ಸಮೇತ ವರದಿ ನೀಡಿದ್ದಾರೆ. ಐತಿಹಾಸಿಕ ಗೆಲುವು ನಮ್ಮದಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಮತದಾರರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಇದೆ. ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಆಡಳಿತದ ಪರ ಅಲೆ ಇರುತ್ತದೆ. ಆದರೆ, ಇಲ್ಲಿ ಆಡಳಿತ ಪಕ್ಷದ ವಿರುದ್ಧ ಅಲೆ ಎದ್ದಿದೆ’ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರು ಗಾಂಧಿನಗರ ಸೇರಿದಂತೆ ವಿವಿಧೆಡೆ ಅದ್ದೂರಿ ಪ್ರಚಾರ ನಡೆಸಿ, ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

‘ಕಾಂಗ್ರೆಸ್ನವರು ದಶಕಗಳ ಕಾಲ ಈ ಕ್ಷೇತ್ರದಲ್ಲಿ ಅಧಿಕಾರ ನಡೆಸಿದ್ದರೂ, ಈ ಭಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿ ನಡೆಸಿಲ್ಲ. ಜನಪ್ರತಿನಿಧಿಗಳಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಈ ಭಾಗದ ಸಮಸ್ಯೆಗಳು ಅರಿವಿಗೆ ಬರುತ್ತವೆ’ ಎಂದು ಟೀಕಿಸಿದರು.

‘ಈ ಭಾಗದಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರಿಗೆ ಇಲ್ಲಿಯವರೆಗೂ ವಸತಿ ಸೌಲಭ್ಯ ಕಲ್ಪಿಸಿಲ್ಲ. ಚರಂಡಿ ಸಮಸ್ಯೆಯು ತೀವ್ರವಾಗಿದೆ. ಮಳೆಗಾಲದಲ್ಲಿ ಇಲ್ಲಿನ ಮನೆಗಳಿಗೆ ನೀರು ನುಗ್ಗುತ್ತದೆ. ಇನ್ನೂ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಸಿಗದೇ ಜನರು ಸಂಕಷ್ಟ ಪಡುತ್ತಿದ್ದಾರೆ’ ಎಂದು ಹೇಳಿದರು.

‘ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸನ್ನು ಹೊತ್ತು ಈ ಬಾರಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಅತ್ಯಮೂಲ್ಯವಾದ ಮತವನ್ನು ನನಗೆ ನೀಡುವ ಮೂಲಕ ಜನಸೇವೆ ಮಾಡಲು ಅವಕಾಶ ನೀಡಬೇಕು’ ಎಂದು ಮನವಿ ಮಾಡಿದರು.

ಮುಖಂಡರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಗಾಂಧಿನಗರ ಹಾಲೇಶ್, ಆಲೂರು ಲಿಂಗರಾಜು, ವೀರೇಶ್ ಡಿ.ಆರ್., ಆಂಜಿನಪ್ಪ, ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-44-139679862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.