ದಾವಣಗೆರೆ: ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಶಾಸಕರಾಗಿರುವರಿಗೂ ಅವಕಾಶ ನೀಡಬೇಕು ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಮನವಿ ಮಾಡಿದರು.

‘ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ನಂತರ ಚನ್ನಗಿರಿ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ. ಯಾವ ಪಕ್ಷ ಅಧಿಕಾರದಲ್ಲಿದ್ದರೂ ಚನ್ನಗಿರಿ ಕ್ಷೇತ್ರಕ್ಕೆ ಅವಕಾಶ ಒದಗಿಬಂದಿಲ್ಲ. ಹಳೆ ಬೇರು ಹೊಸ ಚಿಗುರು ಎಂಬಂತೆ ಯುವಕರೂ ಸಂಪುಟದಲ್ಲಿದ್ದರೆ ಅನುಕೂಲ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಸಚಿವ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದೇನೆ. ಅವಕಾಶ ಮಾಡಿಕೊಡುವಂತೆ ಪಕ್ಷದ ಹೈಕಮಾಂಡ್ ಹಾಗೂ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೇನೆ. ಜಾತಿ, ಜಿಲ್ಲೆಯ ಆಧಾರದ ಮೇಲೆ ಸಚಿವ ಸ್ಥಾನ ಪರಿಗಣಿಸುವ ಬದಲು ಹೋರಾಟದ ಹಿನ್ನೆಲೆಯನ್ನು ಗಮನಿಸಿ ಹಂಚಿಕೆ ಮಾಡಿದರೆ ಸೂಕ್ತ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘ಶಿವಗಂಗಾಗೆ ಸಚಿವ ಸ್ಥಾನ ನೀಡಿ’: ಸಂತೇಬೆನ್ನೂರು ವರದಿ: ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಅವರಿಗೆ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಗ್ರಾಮದ ಕಾಂಗ್ರೆಸ್ ಮುಖಂಡ ಎಂ.ಸಿದ್ದಪ್ಪ ಒತ್ತಾಯಿಸಿದರು.

ಸಂತೋಷ್, ರಹಮತ್ ಉಲ್ಲಾ, ಶೇರ್ ಅಲಿ, ರಂಗಸ್ವಾಮಿ, ರಾಜಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-43-384111152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.