ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಭೋವಿ ಸಮಾಜದ ಮುಖಂಡರಿಂದ ಸಿಎಂಗೆ ಪತ್ರ
Last Updated 10 ಜೂನ್ 2020, 11:48 IST
ಅಕ್ಷರ ಗಾತ್ರ

ದಾವಣಗೆರೆ: ಭೋವಿ, ಲಂಬಾಣಿ, ಕೊರಚ ಮತ್ತು ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದು, ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಚಳವಳಿ ಮೂಲಕ ಆಗ್ರಹಿಸಲಾಯಿತು.

ನಗರದ ಗಡಿಯಾರದ ಕಂಬದ ಬಳಿ ಇರುವ ಮುಖ್ಯ ಅಂಚೆ ಕಚೇರಿಯಲ್ಲಿ ಅಂಚೆ ಡಬ್ಬಕ್ಕೆ ಪತ್ರ ಹಾಕುವ ಮೂಲಕ ಭೋವಿ ಸಮಾಜದ ಮುಖಂಡ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಚಾಲನೆ ನೀಡಿದರು.

‘ಅತ್ಯಂತ ಕಡು ಬಡತನ ಮತ್ತು ಅಸಂಘಟಿತರಾದ ಭೋವಿ, ಲಂಬಾಣಿ, ಕೊರಚ ಮತ್ತು ಕೊರಮ ಸಮಾಜಗಳಿಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ಪೂರ್ವದಲ್ಲೇ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ವೀುಸಲಾತಿಯನ್ನು ಕಲ್ಪಿಸಿದ್ದಾರೆ. ಆದರೆ ಕೆಲವರು ಭೋವಿ, ಲಂಬಾಣಿ, ಕೊರಚ ಮತ್ತು ಕೊರಮ ಸಮಾಜಗಳನ್ನು ಎಸ್‌ಸಿ ಪಟ್ಟಿಯಿಂದ ಕೈಬಿಡಲು ಹುನ್ನಾರವನ್ನು ಸತತವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಸಂವಿಧಾನ ವಿರೋಧಿ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಭೋವಿ ಸಮಾಜದ ಮುಖಂಡರಾದ ಎಚ್.ಚಂದ್ರಪ್ಪ, ಡಿ.ದೇವರಾಜ್ ಆರ್. ಶ್ರೀನಿವಾಸ, ತಿಪ್ಪೇಶಿ, ಉಮೇಶ್, ಆರ್. ಸುರೇಶ್, ವೈ.ತಿಮ್ಮಶ್, ಎಂ.ಅಶೋಕ, ವೈ.ನಾರಾಯಣ್, ಗೊಲ್ಲರಹಳ್ಳಿ ಶಾಂತರಾಜ್, ಎಚ್. ನಾಗರಾಜ, ಗಿರಿಧರ್, ಸೋಮಶೇಖರ್ ಈ.ರುದ್ರೇಶ್ ಡಿ.ಕೇಶವಮೂತಿ೯ ಎಚ್. ಜಯ್ಯಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT