ದಾವಣಗೆರೆ: ಕ್ರಿಕೆಟ್ ಬೆಟ್ಟಿಂಗ್ ಮತ್ತು ಆನ್ಲೈನ್ ಗೇಮಿಂಗ್ ವ್ಯಸನದಿಂದ ಮಾಡಿಕೊಂಡಿದ್ದ ಸಾಲವನ್ನು ತೀರಿಸಲು ಸರಗಳ್ಳತ ಮಾಡುತ್ತಿದ್ದ ಆರೋಪದ ಮೇರೆಗೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಐವರನ್ನು ಹೊನ್ನಾಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಹಾವೇರಿ ಜಿಲ್ಲೆಯ ಮುಂಡರಗಿಯ ನಿಯಾಜ್ ಎಂ. (23), ಮುಸ್ತಾಕ್ (20), ಸುಹೀಲ್ (19), ಅಂಜುಮ್ ಬಾನು (22) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಬಂಧಿತರು. ಆರೋಪಿಗಳಿಂದ ₹ 2.2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 20 ಲಕ್ಷ ಮೌಲ್ಯದ ಕಾರು, ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಇದರಿಂದ ಭರಮಸಾಗರ, ಹೊನ್ನಾಳಿ ಮತ್ತು ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯ 3 ಪ್ರಕರಣಗಳು ಪತ್ತೆಯಾಗಿವೆ.

ಸಾಗರ ತಾಲ್ಲೂಕಿನ ತ್ಯಾಗರ್ತಿ ಗ್ರಾಮದ ಸತೀಶ್ ಎಂಬುವವರು ಮಾರ್ಚ್ 8ರಂದು ಪತ್ನಿಯೊಂದಿಗೆ ಹೊನ್ನಾಳಿಯಿಂದ ಶಿಕಾರಿಪುರದತ್ತ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದರು. ಸೊರಟೂರು ಕ್ರಾಸ್ ಬಳಿ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ₹ 50,000 ಮೌಲ್ಯದ ಚಿನ್ನಾಭರಣ ದೋಚಿದ್ದರು. ಹೊನ್ನಾಳಿ ಪೊಲೀಸ್ ಇನ್ಸ್ಟೆಕ್ಟರ್ ಸುನೀಲ್ ಕುಮಾರ್ ನೇತೃತ್ವದ ತಂಡ ಆರೋಪಿಗಳನ್ನು ಪತ್ತೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.