ಆಗರಬನ್ನಿಹಟ್ಟಿ (ಚನ್ನಗಿರಿ): ‘ಸರ್ಕಾರದಿಂದಲೇ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಸಮುದಾಯದ ಸಹಕಾರವೂ ಅಗತ್ಯವಾಗಿದೆ’ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್ ತಿಳಿಸಿದರು.

ತಾಲ್ಲೂಕಿನ ಆಗರಬನ್ನಿಹಟ್ಟಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ನಲಿಕಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚನ್ನಗಿರಿ ಪಟ್ಟಣದಿಂದ ಈ ಶಾಲೆಗೆ 80 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಶಾಲೆಯ ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಒಂದನೇ ತರಗತಿಯ ನಲಿಕಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಮತ್ತು ಮಾಜಿ ಸದಸ್ಯರು ಸೇರಿ ₹19,000 ವೆಚ್ಚದಲ್ಲಿ ಟೇಬಲ್ ಹಾಗೂ ಕುರ್ಚಿಗಳನ್ನು ದಾನವಾಗಿ ನೀಡಿದ್ದೇವೆ. ಶಾಲೆಯ ಅಭಿವೃದ್ಧಿಗೆ ಸದಾ ಸಿದ್ದರಿದ್ದೇವೆ ಎಂದರು.

ಎಸ್ಡಿಎಂಸಿ ಸದಸ್ಯರಾದ ಮಹಿಬ್ ಉಲ್ಲಾ, ಸಮೀವುಲ್ಲಾ, ಮಾಜಿ ಅಧ್ಯಕ್ಷ ನಫೀಜ್ ಉಲ್ಲಾ, ಮಹಮದ್ ಹಫೀಜ್, ಮುಖ್ಯಶಿಕ್ಷಕ ಸೈಯದ್ ಇಲ್ಯಾಸ್ ಅಹಮದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.