ದಾವಣಗೆರೆ: ‘ಮಕ್ಕಳನ್ನು ಚೆನ್ನಾಗಿ ಓದಿಸಬೇಕು. ಮಕ್ಕಳ ಭವಿಷ್ಯ ಉಜ್ವಲವಾಗಿದ್ದರೆ ಮಾತ್ರ ದೇಶದ ಪ್ರಗತಿ ಸಾಧ್ಯವಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ನಗರದ ಕೃಷ್ಣ ಕಲಾ ಮಂದಿರದಲ್ಲಿ ಸೋಮವಾರ ಜಿಲ್ಲಾ ಆರ್ಯ ಈಡಿಗರ ಸಮಾಜದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.

‘ಪ್ರಜಾಪ್ರಭುತ್ವದಲ್ಲಿ ಚುನಾವಣೆ ಬಂದಾಗ ನಿಮಗೆ ಅನುಕೂಲಕರವಾದ ಸರ್ಕಾರವನ್ನು ನೀವು ಆರಿಸಬೇಕು’ ಎಂದು ಸಲಹೆ ನೀಡಿದರು.

‘ದಾವಣಗೆರೆಯಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದಷ್ಟು ಅಭಿವೃದ್ಧಿಯನ್ನು ಬೇರೆ ಯಾವ ಪಕ್ಷದವರೂ ಮಾಡಿಲ್ಲ. ಮುಂದೆಯೂ ಒಳ್ಳೆಯ ಕೆಲಸಗಳು ಆಗಬೇಕು ಎಂದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ’ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ, ‘ಸಮರ್ಥ್ ಶಾಮನೂರು ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಅವರಿಗೆ ನಿಮ್ಮ ಮತ ನೀಡುವ ಮೂಲಕ ಜಯಶಾಲಿಯನ್ನಾಗಿ ಮಾಡಬೇಕು’ ಎಂದರು.

ಆರ್ಯ ಈಡಿಗರ ಸಮಾಜದ ಅಧ್ಯಕ್ಷ ಎ.ನಾಗರಾಜ, ‘ಬಿ.ಕೆ.ಹರಿಪ್ರಸಾದ್ ಅವರು ನಮ್ಮ ಸಮುದಾಯದ ಹಿತಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಚಿವರಾಗಲಿ’ ಎಂದು ಆಶಿಸಿದರು.

ಸಮಾಜದ ಗೌರವಾಧ್ಯಕ್ಷ ಎಸ್.ಶಂಕರ್, ಕಾರ್ಯದರ್ಶಿ ದೇವೇಂದ್ರಪ್ಪ, ಖಜಾಂಚಿ ಭರಮಪ್ಪ, ಮುಖಂಡರಾದ ಎಸ್.ಭರಮಪ್ಪ, ಆನಂದ, ಸಿ.ವಿ.ರವೀಂದ್ರ ಬಾಬು, ಬಿ.ಸೋಮಶೇಖರ, ಜಯಪ್ರಕಾಶ ಹಾಗೂ ನಿರ್ದೇಶಕರು, ಸಮುದಾಯದವರು, ಕಾರ್ಯಕರ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-43-363150397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.