ದಾವಣಗೆರೆ: ‘ದೇಶದ ಪರಿಸ್ಥಿತಿಯ ಗಂಧ ಗಾಳಿಯೂ ಗೊತ್ತಿಲ್ಲದ ಕಾಂಗ್ರೆಸ್ ಮುಖಂಡರು ತೈಲ ಬೆಲೆ ಏರಿಕೆ ನೆಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳುತ್ತಿರುವುದು ಮೂರ್ಖತನದ ಪರಮಾವಧಿಯಾಗಿದೆ’ ಎಂದು ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಲೋಹಿತ್ ಕುಮಾರ್ ಪಿ., ‘ದೇಶವು ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಭಾರಿ ಪ್ರಮಾಣದಲ್ಲಿ ತೈಲ, ಅನಿಲ ಕೊರತೆ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂಧನ ಬಳಕೆ ಕಡಿಮೆ ಮಾಡಿ, ಮಿತವ್ಯಯದ ಕ್ರಮಗಳನ್ನು ಪಾಲಿಸಬೇಕು ಎಂದು ದೇಶದ ಜನತೆಗೆ ಮನವಿ ಮಾಡಿದ್ದಾರೆ. ಯಾವುದೇ ವಸ್ತುಗಳ ಖರೀದಿಗೆ ನಿರ್ಬಂಧ ಹೇರಿಲ್ಲ’ ಎಂದು ಹೇಳಿದರು.

‘ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ತೈಲ ಬೆಲೆ ಹೆಚ್ಚಳ ಮಾಡಲಾಗಿದೆ. ಅಮೆರಿಕದಲ್ಲಿ ಶೇ 42 ರಷ್ಟು, ಚೀನಾ ಮತ್ತು ಪಾಕಿಸ್ತಾನದಲ್ಲಿ ಶೇ 22 ರಷ್ಟು ಹೆಚ್ಚಾಗಿದೆ. ಆದರೆ, ಭಾರತದಲ್ಲಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಿಂದ ಶೇ 3ರಷ್ಟು ಮಾತ್ರ ಹೆಚ್ಚಿಸಲಾಗಿದೆ’ ಎಂದರು.

‘ಆರ್ಥಿಕತೆಯ ದೃಷ್ಟಿಯಿಂದ ಬಂಗಾರ ಖರೀದಿ ಹಾಗೂ ಪ್ರವಾಸಗಳನ್ನು ಮುಂದೂಡಲು ಪ್ರಧಾನಿ ಮೋದಿ ಅವರು ಜನರಲ್ಲಿ ಮನವಿ ಮಾಡಿದ್ದಾರೆ. ಆದರೆ, ಕಾಂಗ್ರೆಸ್ನವರು ಸುಖಾಸುಮ್ಮನೆ ರಾಜಕೀಯ ಕಾರಣಕ್ಕೆ ಅವರನ್ನು ಟೀಕಿಸುತ್ತಿದ್ದಾರೆ. ಎಷ್ಟೇ ಟೀಕಿಸಿದರೂ, ಜನರು ಮೋದಿ ಅವರ ಜೊತೆಗಿದ್ದಾರೆ’ ಎಂದು ಬಿಜೆಪಿ ಮುಖಂಡರಾದ ಎಚ್.ಸಿ.ಜಯಮ್ಮ ಹೇಳಿದರು.

ಮುಖಂಡರಾದ ಎಸ್.ಟಿ.ವೀರೇಶ್, ಗಂಗಾಧರ ಜಿ.ವಿ., ಗೋವಿಂದಪ್ಪ, ರಘು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-43-1150937336

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.