ದಾವಣಗೆರೆ: ಪಕ್ಷದಿಂದ ಉಚ್ಚಾಟನೆಗೊಂಡಿರುವ ವಿಧಾನಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಅವರು ಕಾಂಗ್ರೆಸ್ಗೆ ಮರಳಲು ಅವಕಾಶ ನೀಡಬಾರದು. ಅವರು ಪಕ್ಷಕ್ಕೆ ಹಿಂದಿರುಗುವ ಪ್ರಯತ್ನದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಎಚ್ಚರಿಕೆ ನೀಡಿದರು.

‘ಜಬ್ಬಾರ್ ಅವರನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮೂರು ಬಾರಿ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಮೂರು ಅವಧಿಗೆ ನೇಮಕ ಮಾಡಿದ್ದು ಶಾಮನೂರು ಶಿವಶಂಕರಪ್ಪ ಕುಟುಂಬ. ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಅವರ ವಿರುದ್ಧ ಈ ಮೊದಲೇ ಶಿಸ್ತುಕ್ರಮ ಕೈಗೊಳ್ಳಬೇಕಿತ್ತು. ಅವರು ಪಕ್ಷಕ್ಕೆ ಮರಳುವ ಪ್ರಯತ್ನ ಮಾಡುವುದನ್ನು ಬಿಟ್ಟು ರಾಜಕೀಯ ನಿವೃತ್ತಿ ಹೊಂದುವುದು ಸೂಕ್ತ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಲಹೆ ನೀಡಿದರು.

‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಚರ್ಚಿಸಲು ತಾಜ್ ಪ್ಯಾಲೇಸ್ನಲ್ಲಿ ಮುಸ್ಲಿಂ ಸಮುದಾಯದ ಸಭೆ ಕರೆಯಲಾಗಿತ್ತು. ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ವಿಚಾರವನ್ನು ಮುನ್ನೆಲೆಗೆ ತಂದ ಅಬ್ದುಲ್ ಜಬ್ಬಾರ್, ಸಭೆಯ ದಿಕ್ಕುತಪ್ಪಿಸಿದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಬಳಿ ಚರ್ಚಿಸಿ ಮುಂದುವರಿಯುವ ಅಭಿಪ್ರಾಯವನ್ನು ಸ್ಥಳೀಯರು ಮುಂದಿಟ್ಟೆವು. ಅಂದಿನಿಂದಲೇ ಜಬ್ಬಾರ್ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡರು’ ಎಂದು ದೂರಿದರು.

‘ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಪಕ್ಷದ ಹಿರಿಯ ಮುಖಂಡರು ದಾವಣಗೆರೆಗೆ ಬಂದಿದ್ದರು. ಅಬ್ದುಲ್ ಜಬ್ಬಾರ್ ಸೌಜನ್ಯಕ್ಕೂ ಪಕ್ಷದ ನಾಯಕರನ್ನು ಭೇಟಿ ಮಾಡಲಿಲ್ಲ. ವಿಧಾನಪರಿಷತ್ ಸದಸ್ಯರಾಗಿ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುವುದು ಅವರ ಜವಾಬ್ದಾರಿಯಾಗಿತ್ತು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಜಾಕೀರ್ ಅಲಿ, ಶಫಿಕ್ ಪಂಡಿತ್, ಕಬೀರ್ ಖಾನ್, ಮೊಹಮ್ಮದ್ ಫಾರೂಕ್, ಆರೀಫ್, ನಯಾಜ್ ಖಾನ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-43-1765399492

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.